Darshan Thoogudeepa Case: ಚಿತ್ರದುರ್ಗದಲ್ಲಿ ಆರೋಪಿಗಳ ಜೊತೆ ಪೊಲೀಸರಿಂದ ತಡರಾತ್ರಿ ಸ್ಥಳ ಮಹಜರು-ಮುಂದೇನಾಯ್ತು ಗೊತ್ತಾ?
ಚಿತ್ರದುರ್ಗ, ಜೂನ್, 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದುರ್ಗಕ್ಕೆ ಆರೋಪಿಗಳನ್ನು ಕರೆತಂದು ತಡರಾತ್ರಿ ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿ ರಘು ಜೊತೆಗೆ ಪೊಲೀಸರಿಂದ ಸ್ಥಳ ಮಹಜರು ನಡೆಸಲಾಗಿದೆ. ಮೊದಲಿಗೆ ಕುಂಚಿಗನಾಳ್ ಬಳಿ ಇರುವ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಯ ಟೀ ಸ್ಟಾಲ್ ಹತ್ತಿರ ಸ್ಥಳ ಮಹಜರು ನಡೆಸಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದರು.

ಆರೋಪಿ ರಘು ಮೃತ ರೇಣುಕಾ ಸ್ವಾಮಿಯನ್ನು ದರ್ಶನ್ ಬಳಿ ಕರೆದೊಯ್ದಲು ಚಿತ್ರದುರ್ಗ ನಗರದಿಂದ ಆಟೋ ಮೂಲಕ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಗೆ ಕರೆದುಕೊಂಡು ಹೋಗಿದ್ದು, ನಂತರ ಅಲ್ಲಿಂದ ಟ್ಯಾಕ್ಸಿ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯ ಹೇಳಿಕೆ ಮೇರೆಗೆ ಪೊಲೀಸರು ಸ್ಥಳ ಮಹಜರು ನಡೆಸಿದರು.
ತಿಪ್ಪಾರೆಡ್ಡಿಗೆ ಬೆದರಿಕೆ ಕರೆ: ರೇಣುಕಾಸ್ವಾಮಿ ಕೊಲೆ ಪ್ರಕರಣ ಖಂಡಿಸಿಸಿ ನಟ ದರ್ಶನ್ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಮಾಜಿ ಶಾಸಕ ಜಿ.ಎಸ್.ತಿಪ್ಪಾರೆಡ್ಡಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗದಲ್ಲಿ ಬುಧವಾರ (ಜೂನ್ 12) ನಟ ದರ್ಶನ್ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ಭಾಗಿಯಾಗಿ ನಟ ದರ್ಶನ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬರು ಮಾಜಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ಕರೆ ಮಾಡಿ, ನೀವು ದರ್ಶನ್ ವಿರುದ್ಧ ಏಕೆ ಪ್ರತಿಪಟಿಸುತ್ತಿದ್ದೀರಿ? ದರ್ಶನ್ ಕೊಲೆ ಮಾಡಿರುವುದಕ್ಕೆ ನಿಮಗೆ ಏನಾದರೂ ಸಾಕ್ಷಿಗಳು ಇದಾವಾ ಹೇಗೆ ಎಂದು ಪ್ರಶ್ನಿಸಿದ್ದಾರೆಂತೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. ಕೆರೆ ಮಾಡಿದ ವ್ಯಕ್ತಿ ಯಾರು, ಯಾಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.
ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಅವರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವ ಆರೋಪಿಗಳಿಂದ ಸ್ಥಳ ಮಹಜರು ನಡೆಯಲಿದೆ. ನಾಲ್ವರು ಆರೋಪಿಗಳನ್ನು ಬೆಂಗಳೂರಿನಿಂದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಚಿತ್ರದುರ್ಗಕ್ಕೆ ಕರೆದುಕೊಂಡು ಬಂದು ಸ್ಪಾಟ್ ವೆರಿಫಿಕೇಷನ್ ಮಾಡಿಸಲಿದ್ದಾರೆ. ಎ3 ಆರೋಪಿಯ ಸಲಹೆ ಮೇರೆಗೆ ಕಿಡ್ನಾಪ್ ಮಾಡಿದ್ದ ರಾಘವೇಂದ್ರ, ಕಾರ್ತಿಕ್ , ನಂದಿಶ್, ಪವನ್‌ನಿಂದ ಕಾಮಾಕ್ಷಿ ಪಾಳ್ಯ ಪೊಲೀಸರು ಕಿಡ್ನಾಪ್ ಸ್ಥಳದಲ್ಲಿ ಮಹಜರು ಮಾಡಿಸಲಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ತಂದೆ ಹೇಳಿದ್ದೇನು?: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಅವರ ತಂದೆ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಮನುಷ್ಯತ್ವ ಹಾಗೂ ಮಾನವೀಯತೆ ಇಲ್ಲ, ಇವರೆಲ್ಲ ಕೊಲೆಗಡಕರು ಎಂದು ಮೃತನ ತಂದೆ ಕಾಶಿನಾಥ ಶಿವನಗೌಡ ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗನ ಅಂತ್ಯಕ್ರಿಯೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರೆಲ್ಲ ದೊಡ್ಡ ದೊಡ್ಡ ಮನುಷ್ಯರು, ದೊಡ್ಡ ದೊಡ್ಡ ಸ್ಟಾರ್‌ಗಳು ಏನ್ರೀ? ಇದು ವ್ಯವಸ್ಥೆ ಎಂದು ಕಣ್ಣೀರಿಡುವ ಮೂಲಕ ಅಸಮಾಧನ ಹೊರಹಾಕಿದರು.
ಏನು ಮಾತಾಡೋದು, ಹೋದ ಮಗ ಬರ್ತಾನಾ? ಅವನ್ಯಾರೋ ಜೀವನ ಕೊಡ್ತಾನಾ? ಎಂದು ಪ್ರಶ್ನಿಸಿದರು. ಮಗನಿಗೆ ಎದೆ, ಮಾರ್ಮಾಂಗ, ಮುಖ, ಕಾಲು, ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಹೋಡೆದು ಸಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications