Darshan Thoogudeepa Case: ಚಿತ್ರದುರ್ಗಕ್ಕೆ ರೇಣುಕಾಸ್ವಾಮಿ ಮೃತದೇಹ ಆಗಮನ
ಚಿತ್ರದುರ್ಗ, ಜೂನ್, 11: ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಮೃತದೇಹವನ್ನು ಅಂತ್ಯಕ್ರಿಯೆಗೆ ಚಿತ್ರದುರ್ಗದ ತುರುವನೂರಿಗೆ ತರಲಾಯಿತು.
ಬೆಂಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿದ ಬಳಿಕ, ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಯಿತು. ಇದಾದ ನಂತರ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಚಿತ್ರದುರ್ಗಕ್ಕೆ ತರಲಾಗಿದ್ದು, ಮೃತನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಾದ ಬಳಿಕ ವೀರಶೈವ ಲಿಂಗಾಯತ ಸಮುದಾಯ ಸಂಪ್ರದಾಯದಂತೆ ಚಿತ್ರದುರ್ಗ ನಗರದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಅವರನ್ನ ಜೂನ್ 9ರಂದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಆದೇಶಿಸಿದೆ.












Click it and Unblock the Notifications