• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ; ವಿದೇಶದಿಂದ ಬಂದ ಸಂಸದರ ಪುತ್ರಿಗೆ ಕೊರೊನಾ ಸೋಂಕು

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮಾರ್ಚ್ 24: ಕೋಟೆನಾಡು ಚಿತ್ರದುರ್ಗಕ್ಕೂ ಕೊರೊನಾ ಸೋಂಕು ಕಾಲಿಟ್ಟಿದೆ. ಚಿತ್ರದುರ್ಗ ನಗರದಲ್ಲಿ‌ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ಸಂಸದರೊಬ್ಬರ 37 ವರ್ಷದ ಮಗಳಲ್ಲಿ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಗಯಾನದಿಂದ ಇವರು ಬಂದಿದ್ದಾಗಿ ತಿಳಿದುಬಂದಿದೆ. ಮಾರ್ಚ್ 22ರಂದು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಇಂದು ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.

ಮಂಗಳೂರಿನಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆ

ಈ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ಮಹಿಳೆಯನ್ನು ಚಿತ್ರದುರ್ಗದಿಂದ ದಾವಣಗೆರೆ ಐಸೊಲೇಷನ್ ವಾರ್ಡ್ ಗೆ ದಾಖಲಿಸಲಾಗಿದೆ. ಸಂಸದರ ಮನೆಯ ಸುತ್ತಲೂ 5 km ರೆಡ್ ಝೋನ್ ಹೇರಲಾಗಿದೆ. ರೆಡ್ ಝೋನ್ ನಲ್ಲಿರುವ ಮನೆಯವರು ಯಾರೂ ಹೊರ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದ್ದಾರೆ.

ಸೋಂಕು ಪತ್ತೆ ಹಿನ್ನೆಲೆಯಲ್ಲಿ ಸಂಸದ ಸೇರಿದಂತೆ ಮನೆಯಲ್ಲಿನ 6 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 4 ಜನರ ವರದಿ ಬಂದಿದ್ದು, ಎಲ್ಲರದ್ದು ನೆಗೆಟಿವ್ ಬಂದಿದೆ. ಸೋಂಕಿತ ಮಹಿಳೆ ಜೊತೆ ಇಬ್ಬರು ಮಕ್ಕಳಿದ್ದು, ಅವರಲ್ಲೂ ಸೋಂಕು ಕಂಡು ಬಂದಿಲ್ಲ.

English summary
coronavirus positive case found in chitradurga. Daughter of mp reported coronavirus positive today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X