ಚಿತ್ರದುರ್ಗ; ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಬೊಮ್ಮಾಯಿ ಎದುರೇಟು
ಚಿತ್ರದುರ್ಗ, ಜೂನ್ 20: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಧಮ್ ಇಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
Recommended Video
ಕಾಲ ಕಾಲಕ್ಕೂ ಯಡಿಯೂರಪ್ಪ, ಸಿಎಂ ಧಮ್ ಏನೆಂದು ತೋರಿಸಿದ್ದರಿಂದಲೇ ಅವರು ಸಿಎಂ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸಿಯೂ ಈಗ ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಯಡಿಯೂರಪ್ಪ ಈಗ ನಾಲ್ಕನೇ ಬಾರಿಗೆ ಸಿಎಂ ಆಗಿ ಸಮರ್ಥ ಆಡಳಿತ ನಡೆಸುತ್ತಿದ್ದಾರೆ" ಎಂದರು.

ಎಚ್ ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದ ಬಗ್ಗೆ ಪ್ರತಿಕ್ರಿಯಿಸಿ, ಪರಿಷತ್ ಟಿಕೆಟ್ ಸಿಗದ ವಿಚಾರದಲ್ಲಿ ವಿಶ್ವನಾಥ್ ಅವರೇ ಸಿಎಂ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು.
"ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡುವ ಬಗ್ಗೆ ಕೇಳಿಕೊಂಡಿದ್ದೇವೆ. ಈ ಕುರಿತು ಗುರುವಾರ ನಡೆಯಲಿರುವ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ" ಎಂದು ತಿಳಿಸಿದರು.












Click it and Unblock the Notifications