• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆ.ಪೂರ್ಣಿಮಾಗೆ ಸಚಿವ ಸ್ಥಾನ ನೀಡುವಂತೆ ಗೊಲ್ಲ ಸಮುದಾಯ ಒತ್ತಾಯ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜುಲೈ 26: ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ಸ್ವೀಕರಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ, ಗೊಲ್ಲ ಸಮಾಜಕ್ಕೂ ಒಂದು ಸಚಿವ ಸ್ಥಾನ ನೀಡಬೇಕು ಎಂದು ಚಿತ್ರದುರ್ಗದಲ್ಲಿ ಗೊಲ್ಲ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

 ಚಿತ್ರದುರ್ಗದಲ್ಲಿ ಸಚಿವ ಸ್ಥಾನಕ್ಕೆ ಅರ್ಧ ಡಜನ್ ಹೆಸರುಗಳು... ಚಿತ್ರದುರ್ಗದಲ್ಲಿ ಸಚಿವ ಸ್ಥಾನಕ್ಕೆ ಅರ್ಧ ಡಜನ್ ಹೆಸರುಗಳು...

"ಸಚಿವ ಸಂಪುಟದಲ್ಲಿ ಗೊಲ್ಲ ಸಮಾಜಕ್ಕೆ ಒಂದು ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ ಗೊಲ್ಲ ಸಮುದಾಯದ ಸುಮಾರು 35 ಲಕ್ಷ ಜನಸಂಖ್ಯೆ ಇದ್ದು ರಾಜ್ಯದ ಏಕೈಕ ಶಾಸಕಿ ಕೆ.ಪೂರ್ಣಿಮಾಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ, ಗೊಲ್ಲ ಸಮಾಜದ ಅಭಿವೃದ್ಧಿಗೆ ಸರ್ಕಾರ ಶ್ರಮಿಸಬೇಕು" ಎಂದು ಗೊಲ್ಲ ಸಮುದಾಯ ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಹಿಳಾ ಕೋಟದಲ್ಲಿ ಸಚಿವ ಸ್ಥಾನ ನೀಡಬೇಕು. ಕೇಂದ್ರ ಬಿಜೆಪಿ ವರಿಷ್ಠರು ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡುವತ್ತ ಆಲೋಚಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

English summary
BS Yeddyurappa will be sworn in as the Chief Minister today and is preparing to form the BJP government in the state. In this case, the leaders of the Golla society in Chitradurga have demanded ministerial position to poornima.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X