ನಾನು ಕುರುಬ ಎಂದು ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಶ್ರೀ

ಚಿತ್ರದುರ್ಗ, ಫೆಬ್ರವರಿ 03: ನಾನು ಕುರುಬ ಸಮುದಾಯದ ಸ್ವಾಮೀಜಿ ಎನ್ನುವ ಕಾರಣಕ್ಕೆ ನನ್ನನ್ನು ಚನ್ನಕೇಶವ ದೇವಸ್ಥಾನದ ಗರ್ಭಗುಡಿ ಒಳಗೆ ಬಿಡಲಿಲ್ಲ. ದೇವಸ್ಥಾನಕ್ಕೆ ಹೋಗಿದ್ದಕ್ಕೆ ದೇವಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಕನಕ ಗುರು ಪೀಠದ ಈಶ್ವರನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯಲ್ಲಿ ನಡೆದ ಪರಿವರ್ತನೆ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಮಾತನಾಡಿದ ಈಶ್ವರನಂದಪುರಿ ಸ್ವಾಮೀಜಿ, ಇತ್ತೀಚಿಗಷ್ಟೇ ಹೊಸದುರ್ಗ ತಾಲೂಕಿನ ಬಾಗೂರು ಗ್ರಾಮದಲ್ಲಿರುವ ಚೆನ್ನಕೇಶವ ದೇವಸ್ಥಾನಕ್ಕೆ ಹೋಗಿದ್ದೆವು. ಆದರೆ ಗರ್ಭಗುಡಿ ಒಳಗೆ ನಮ್ಮನ್ನು ಬಿಡಲಿಲ್ಲ ನಾವು ದೇವಸ್ಥಾನಕ್ಕೆ ಹೋದ ಕಾರಣಕ್ಕೆ ದೇವಸ್ಥಾನವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Denied Entry Into Chennakeshava Temple Sanctorum Due To Saste: Eshwaranandapuri Sri

ಗ್ರಾಮದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ದೇವಾಲಯ ದೇವಸ್ಥಾನಕ್ಕೆ ಹೋಗಿದ್ದಾಗ ಪೂಜಾರಿ ನಮಗೆ ನರಕ ತೋರಿಸಿಬಿಟ್ಟರು. ಹೆಣ್ಣುಮಕ್ಕಳಿಗೆಲ್ಲಾ ಗರ್ಭಗುಡಿ ಪ್ರವೇಶಿಸಲು ಬಿಟ್ಟಿದ್ದರು. ಆದರೆ ಮಠಾಧೀಶರದ ನಮಗೆ ಚನ್ನಕೇಶವ ದೇಗುಲದ ಗರ್ಭಗುಡಿಗೆ ಹೋಗಲು ಬಿಡಲಿಲ್ಲ. ಮುಜರಾಯಿ ಇಲಾಖೆ ದೇವಾಲಯ ಎಂದು ಗೊತ್ತಿದ್ದರೆ ನಾವು ಅಲ್ಲಿಯೇ ಪ್ರತಿಭಟಿಸುತ್ತಿದ್ದೆವು ಎಂದರು.

ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ನಾವು ಕೂಡ ಪ್ರತಿಭಟನೆ ಮಾಡುತ್ತಿದ್ದೇವು. ಆದರೆ ದೇವಾಲಯ ಮುಜರಾಯಿ ಇಲಾಖೆ ದೇಗುಲ ಎಂಬುದು ನಮಗೆ ತಿಳಿದಿರಲಿಲ್ಲ. ದೇವಸ್ಥಾನದ ಒಳಗೆ ಕುರುಬ ಸಮುದಾಯದ ಸ್ವಾಮೀಜಿ ಬಂದಿದ್ದಾರೆ ಎಂಬ ಕಾರಣಕ್ಕೆ ದೇವಸ್ಥಾನವನ್ನು ಸ್ವಚ್ಛಗೊಳಿಸಿದ್ದಾರೆ. ಇನ್ನು ಮುಂದೆ ಎಂದೆಂದಿಗೂ ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನಕ್ಕೆ ನಾವು ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

Denied Entry Into Chennakeshava Temple Sanctorum Due To Saste: Eshwaranandapuri Sri

ಈ ಸಂದರ್ಭದಲ್ಲಿ ಮಾದರ ಚೆನ್ನಯ್ಯ ಸ್ವಾಮೀಜಿ, ಸಾಣೆಹಳ್ಳಿ ತರಬಾಳು ಮಠದ ಶ್ರೀ ಪಂಡಿತಾರಾಧ್ಯಶ್ರೀ ಸ್ವಾಮೀಜಿ, ಕುಂಚಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಮಠದ ಪುರುಷೋತ್ತಮನದ ಪುರಿ ಸ್ವಾಮೀಜಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+