ಕೋಟೆನಾಡು ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಕಣದಲ್ಲಿರುವ ಮತ್ತು ನಾಮಪತ್ರ ವಾಪಸ್ ಪಡೆದವರ ವಿವರ

ಚಿತ್ರದುರ್ಗ, ಏಪ್ರಿಲ್‌, 25: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಆರು ಕ್ಷೇತ್ರಗಳಿಂದ ನಾಮಪತ್ರ ಕ್ರಮಬದ್ದಗೊಂಡ 90 ಅಭ್ಯರ್ಥಿಗಳ ಪೈಕಿ, 14 ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇದರಲ್ಲಿ 76 ಅಭ್ಯಥಿಗಳು ಅಖಾಡದಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 23 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಕಾಮ್ರಾನ್ ಅಲಿ ಕೆ.ಎಸ್ ಹಾಗೂ ಟಿ.ಕೆ.ಬಸವರಾಜ್ ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮವಾಗಿ ಆಮ್ ಆದ್ಮಿ ಪಕ್ಷದ ಬಿ.ಈ.ಜಗದೀಶ್, ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ, ಬಹುಜನ ಸಮಾಜ ಪಕ್ಷದ ಪ್ರಕಾಶ್.ಎನ್, ಜಾತ್ಯಾತೀತ ಜನತಾ ದಳದ ಜಿ.ರಘು ಆಚಾರ್ ಅಖಾಡಲ್ಲಿದ್ದಾರೆ.

Details of Candidates and those who withdrawn nomination in 6 constituencies of chitradurga district

ಹಾಗೆಯೆ ಕಾಂಗ್ರೇಸ್ ಪಕ್ಷದ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಟಿ.ಚಂದ್ರಣ್ಣ, ಕರ್ನಾಟಕ ಸ್ವಾಭಿಮಾನಿ ರೈತರ ಕಾರ್ಮಿಕರ ಪಕ್ಷದ ಜಿ.ಎಸ್.ನಾಗರಾಜು, ಸಮಾಜವಾದಿ ಪಕ್ಷದ ಎನ್.ಮಂಜಪ್ಪ, ಸರ್ವೋದಯ ಕರ್ನಾಟಕ ಪಕ್ಷದ ಕೆ.ಎಸ್.ವಿಜಯ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬಾಳೇಕಾಯಿ ಶ್ರೀನಿವಾಸ.ಹೆಚ್ ಕಣದಲ್ಲಿದೆ.

ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿಗಳಾದ ಗಣೇಶ್, ಆರ್.ಗೋಪಿನಾಥ್, ಜಿ.ಚಿತ್ರಶೇಖರಪ್ಪ, ಪಿ.ಎಸ್.ಪುಟ್ಟಸ್ವಾಮಿ (ಸ್ವಾಮಿ), ಎಂ.ಎ.ಬಸವರಾಜು, ಭೂತರಾಜ.ವಿ.ಎಸ್, ಮೋಹನ್ಕಮಾರ್.ಆರ್, ಎಂ.ಹೆಚ್.ಶಶಿಧರ್, ಸುರೇಶ್.ಎನ್, ಸೌಭಾಗ್ಯ ಬಸವರಾಜನ್, ಡಾ.ಹೆಚ್.ಕೆ.ಎಸ್.ಸ್ವಾಮಿ ಸೇರಿದಂತೆ ಒಟ್ಟು 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರ

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 14 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಬಿ.ಸುಧಾಕರ, ಆರ್.ಧನು ನಾಮಪತ್ರ ಹಿಂಪಡೆದಿದ್ದಾರೆ.

ಅಂತಿಮವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಸುಧಾಕರ್.ಡಿ, ಬಹುಜನ ಸಮಾಜ ಪಕ್ಷದ ಎನ್.ರಂಗಸ್ವಾಮಿ, ಆಮ್ ಆದ್ಮಿ ಪಕ್ಷದ ಕೆ.ಟಿ.ತಿಪ್ಪೇಸ್ವಾಮಿ, ಭಾರತೀಯ ಜನತಾ ಪಕ್ಷದ ಕೆ.ಪೂರ್ಣಿಮಾ, ಜಾತ್ಯಾತೀತ ಜನತಾದಳ ಎಂ.ರವೀಂದ್ರಪ್ಪ, ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ವಿನಯ್.ಎಸ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಕರ್ನಾಟಕ)ದ ಬಿ.ಪುಟ್ಟಲಿಂಗಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಹೆಚ್.ಮಹೇಶ್, ಉತ್ತಮ ಪ್ರಜಾಕೀಯ ಪಕ್ಷದ ಈ.ಪಾತಲಿಂಗಪ್ಪ ಕಣದಲ್ಲಿದ್ದಾರೆ.

ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿಗಳಾದ ರಂಗಯ್ಯ.ಎನ್, ಎನ್.ಓ.ರಂಗಸ್ವಾಮಿ, ಬಿ.ಶಶಿಕಲ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 12 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಜಿ.ತಿಪ್ಪೇಸ್ವಾಮಿ, ವೈ.ಹೆಚ್.ಸುಜಯ ಕುಮಾರ್ ನಾಮಪತ್ರ ಹಿಂಪಡೆದಿದ್ದಾರೆ.

ಅಂತಿಮವಾಗಿ ಭಾರತೀಯ ಜನತಾ ಪಕ್ಷದ ಎಸ್.ತಿಪ್ಪೇಸ್ವಾಮಿ, ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಎನ್.ವೈ.ಗೋಪಾಲಕೃಷ್ಣ, ಜಾತ್ಯಾತೀತ ಜನತಾ ದಳದ ವೀರಭದ್ರಪ್ಪ, ಬಹುಜನ ಸಮಾಜವಾದಿ ಪಕ್ಷದ ಎಮ್.ಓ. ಮಂಜುನಾಥ ಸ್ವಾಮಿ ನಾಯಕ, ಆಮ್ ಆದ್ಮಿ ಪಕ್ಷದ ಎಸ್.ಟಿ.ಹರೀಶ್ ನಾಯಕ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಲ್ಲಿಕಾರ್ಜುನ ಕಣದಲ್ಲಿದ್ದಾರೆ.

ಇನ್ನು ಪಕ್ಷೇತರ ಅಭ್ಯರ್ಥಿಗಳಾದ ಎನ್.ಮಲ್ಲಯ್ಯ ಸ್ವಾಮಿ, ಓ.ಗೋವಿಂದ, ಕೆ.ಪಿ.ಹರೀಶ್ ಕುಮಾರ್, ಟಿ.ಶಶಿಕುಮಾರ್ ಸೇರಿದಂತೆ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರ

ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 15 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಬಿ.ಶಿವರುದ್ರಪ್ಪ, ಎ.ಎಸ್.ಮಂಜುನಾಥ ನಾಮಪತ್ರ ಹಿಂಪಡೆದಿದ್ದಾರೆ.

ಅಂತಿಮವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಬಿ.ಜಿ.ಗೋವಿಂದಪ್ಪ, ಜಾತ್ಯಾತೀತ ಜನತಾ ದಳದ ತಿಪ್ಪೇಸ್ವಾಮಿ.ಎಂ, ಬಹುಜನ ಸಮಾಜ ಪಕ್ಷದ ತಿಮ್ಮಪ್ಪ.ಕೆ, ಆಮ್ ಆದ್ಮಿ ಪಕ್ಷದ ರಾಜು.ಎನ್.ವಿ, ಭಾರತೀಯ ಜತನಾ ಪಕ್ಷದ ಎಸ್.ಲಿಂಗಮೂರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೆ.ಆರ್.ಎಸ್ ತನು ಚಿಕ್ಕಣ ಯಾದವ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಕುಮಾರ್ ಎಸ್ ತುಂಬಿನಕೆರೆ ಅಖಾಡಲ್ಲಿದ್ದಾರೆ.

ಹಾಗೆಯೆ ಪಕ್ಷೇತರ ಅಭ್ಯರ್ಥಿಗಳಾದ ಬಿ.ಗೀತಾಂಜಲಿ, ಗೂಳಿಹಟ್ಟಿ ಡಿ ಶೇಖರ್, ಜಂಗಮ ಸತೀಶ ಬನಸಿಹಳ್ಳಿ, ಡಿ.ಪಾಂಡುರಂಗ ಗರಗ್, ಟಿ.ಮಂಜುನಾಥ, ಶೇಖರ್ ನಾಯ್ಕ್.ಎಂ.ಆರ್. ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 19 ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ನಿರಂಜನ.ಎ.ಡಿ, ಜಿ.ಈ.ಉಮಾಪತಿ, ತಿಪ್ಪೇಸ್ವಾಮಿ.ಟಿ, ಆಂಜನೇಯ, ಅಪ್ಪಾಜಿ ಎ ಚನ್ನಬಸವಣ್ಣನವರು, ಹನುಮಂತಪ್ಪ.ಬಿ ನಾಮಪತ್ರ ಹಿಂಪಡೆದಿದ್ದಾರೆ.

ಅಂತಿಮವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಹೆಚ್.ಆಂಜನೇಯ, ಜಾತ್ಯಾತೀತ ಜನತಾ ದಳದ ಎಸ್.ಆರ್.ಇಂದ್ರಜೀತ್ ನಾಯ್ಕ್, ಭಾರತೀಯ ಜನತಾ ಪಕ್ಷದ ಎಂ.ಚಂದ್ರಪ್ಪ, ಬಹುಜನ ಸಮಾಜ ಪಕ್ಷದ ಕೆ.ಎನ್.ದೊಡ್ಡಟ್ಟೆಪ್ಪ, ಆಮ್ ಆದ್ಮಿ ಪಕ್ಷದ ಮಾಹಂತೇಶ್.ಸಿ.ಯು, ಸಮಾಜವಾದಿ ಪಕ್ಷದ ಪಿ.ಎಸ್.ಜಯಪ್ಪ, ಜೈ ಮಹಾಭಾರತ್ ಪಕ್ಷದ ಪ್ರಕಾಶ್.ಹೆಚ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಎಸ್.ರಘುವೀರ ವರ್ಮಾ, ಉತ್ತಮ ಪ್ರಜಾಕೀಯ ಪಕ್ಷದ ರಾಜು ಕಣದಲ್ಲಿದ್ದಾರೆ.

ಪಕ್ಷೇತರರಾದ ಡಾ.ಎಲ್.ಜಯಸಿಂಹ, ಮಂಜುನಾಥ.ಟಿ, ಮಹೇಶ್ ಕುಮಾರ್.ಎಂ.ಪಿ, ಹನುಮತಪ್ಪ.ಡಿ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 7 ಅಭ್ಯರ್ಥಿಗಳ ಪೈಕಿ ಯಾರು ನಾಮಪತ್ರ ಹಿಂಪಡೆದಿಲ್ಲ. ಅಂತಿಮವಾಗಿ ಭಾರತೀಯ ಜನತಾ ಪಕ್ಷದ ಅನಿಲ್ ಕುಮಾರ್.ಆರ್, ಆಮ್ ಆದ್ಮಿ ಪಕ್ಷದ ಮಾರಕ್ಕ, ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಟಿ.ರಘುಮೂರ್ತಿ, ಜಾತ್ಯಾತೀತ ಜನತಾ ದಳದ ರವೀಶ್‍ಕುಮಾರ್.ಎಂ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭೂಜರಾಜ.ಸಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಅಂಜಮ್ಮ, ಕೆ.ಟಿ.ಕುಮಾರಸ್ವಾಮಿ ಕಣದಲ್ಲಿದ್ದಾರೆ.

ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ 76 ಅಭ್ಯರ್ಥಿಗಳು ಚುನಾವಣಾ ಸ್ಪರ್ಧೆಯಲಿದ್ದಾರೆ. ಮೇ 10 ರಂದು ಮತದಾನ ನಡೆಯಲಿದೆ. ನಂತರ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮತದಾರ ಪ್ರಭುಗಳು ಯಾರ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+