ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

|
Google Oneindia Kannada News

ಚಿತ್ರದುರ್ಗ, ಆಗಸ್ಟ್ 14: ಕೋವಿಡ್ ಸೋಂಕು ನಡುವೆಯೇ ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಇದೇ ವೇಳೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಶನಿವಾರ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.

ಕೋವಿಡ್- 19 ಸಾಂಕ್ರಾಮಿಕ ರೋಗದಿಂದಾಗಿ ಇದೇ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಕೋವಿಡ್ ಕಾರಣದಿಂದಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಹೋಗಿ ಸನ್ಮಾನಿಸಲಾಯಿತು.

ಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ರಾಮನಗರ ಜಿಲ್ಲಾಧಿಕಾರಿಸ್ವಾತಂತ್ರ್ಯ ಹೋರಾಟಗಾರರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ರಾಮನಗರ ಜಿಲ್ಲಾಧಿಕಾರಿ

ಈ ವೇಳೆ ಮಾತನಾಡಿದ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ, "ಕೋವಿಡ್-19 ಹಿನ್ನಲೆಯಲ್ಲಿ ಸರ್ಕಾರದ ಆದೇಶದಂತೆ ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಆಗಮಿಸಿ ಸನ್ಮಾನಿಸಲಾಗುತ್ತಿದೆ,'' ಎಂದು ಹೇಳಿದರು.

Chitradurga District Administration Paid Homage To The Freedom Fighters

ಭಾರತ ಸ್ವಾತಂತ್ರ್ಯೋತ್ಸವ 75ನೇ ವರ್ಷದ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. "ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನ ನಿಜಕ್ಕೂ ಸ್ಮರಣೀಯವಾದದು. ಹೋರಾಟಗಾರರ ತ್ಯಾಗ, ಬಲಿದಾನದಿಂದ ನಾವು ಸ್ವತಂತ್ರರಾಗಿದ್ದೇವೆ," ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ. ಭೀಮಪ್ಪ ಮಾತನಾಡಿ, "ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಬೇಕು ಎಂದು ತೀರ್ಮಾನಿಸಿ ಸ್ನೇಹಿತರ ಜೊತೆಗೆ ಎಸ್. ನಿಜಲಿಂಗಪ್ಪ ಅನುಯಾಯಿಗಳಾಗಿ ಕೆಲಸ ಮಾಡಿದೆವು. ಈಚಲು ಮರದ ಸತ್ಯಾಗ್ರಹದಲ್ಲಿ ಭಾಗಹಿಸಿ, ಹೆಂಡದ ಅಂಗಡಿಗಳನ್ನು ನಾಶ ಮಾಡಲಾಯಿತು. ಇದಕ್ಕಾಗಿ ಕೆಲವು ದಿನಗಳ ಕಾಲ ಬಂಧನದಲ್ಲಿಟ್ಟು, ಗಡಿಪಾರು ಮಾಡಲಾಯಿತು. ನಂತರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದರಿಂದ ಒಂದು ವರ್ಷ ವಿದ್ಯಾಭ್ಯಾಸ ಸ್ಥಗಿತವಾಯಿತು. ಆದಾಗ್ಯೂ ಭಾರತ ಸ್ವಾತಂತ್ರ್ಯ ಪಡೆಯಬೇಕು ಎಂದು ಬ್ರಿಟೀಷರ ವಿರುದ್ಧ ಹೋರಾಟ ನಡೆಸಿದೆ. ನಂತರ ಸ್ವಾತಂತ್ರ್ಯ ಪಡೆಯಲಾಯಿತು,'' ಎಂದು ತಮ್ಮ ಅನುಭವ ಹಂಚಿಕೊಂಡರು.

Chitradurga District Administration Paid Homage To The Freedom Fighters

ಈಗಿನ ಯುವಕರು ಹೆಚ್ಚಾಗಿ ಆಟ- ಪಾಠದಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆಯಲ್ಲಿಯೂ ಸಹ ಒಲಿಂಪಿಕ್ಸ್‍ನಂತಹ ಕ್ರೀಡಾಕೂಟದಲ್ಲಿ ಹೆಚ್ಚು ಹೆಚ್ಚು ಯುವಕರು ಪಾಲ್ಗೊಂಡು ಪದಕಗಳನ್ನು ತರುವಂತಾಗಬೇಕು ಎಂದು ಯುವ ಜನ ಕುರಿತಂತೆ ತಮ್ಮ ಆಶಯ ವ್ಯಕ್ತಪಡಿಸಿದರು.

ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ.ಭೀಮಪ್ಪ ಹಾಗೂ ನರೇನಾಳ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ತಿಮ್ಮಾರೆಡ್ಡಿ, ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಹನುಮಂತಪ್ಪ (ಮಡಿವಾಳರ) ಮತ್ತು ಭೀಮಪ್ಪ ಹಾಗೂ ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರಾದ ಎ. ಗೋವಿಂದಪ್ಪ ಸೇರಿದಂತೆ ಐದು ಮಂದಿ ಸ್ವಾತಂತ್ರ್ಯ ಹೋರಾಟಗಾರರಿಗೆ ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು.

Chitradurga District Administration Paid Homage To The Freedom Fighters

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ, ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ, ಚಿತ್ರದುರ್ಗ ತಹಶೀಲ್ದಾರ ಸತ್ಯನಾರಾಯಣ, ಹಿರಿಯೂರು ತಹಶೀಲ್ದಾರ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ಧನಂಜಯ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

English summary
The freedom fighters were felicitated by the Chitradurga district administration as part of the 75th Independence Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X