Breaking:ಮುರುಘಾ ಶರಣರನ್ನು 4 ದಿನ ಪೊಲೀಸ್ ಕಸ್ಟಡಿಗೆ ವಹಿಸಿದ ಕೋರ್ಟ್
ಚಿತ್ರದುರ್ಗ, ಸೆಪ್ಟೆಂಬರ್ 2: ಮುರುಘಾ ಮಠದ ಅಪ್ರಾಪ್ತ ಬಾಲಕಿಯರಿಗೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಗುರುವಾರ ರಾತ್ರಿ ಮುರುಘಾ ಶರಣರನ್ನು ಬಂಧಿಸಿದ್ದ ಪೊಲೀಸರು ನ್ಯಾಯಾದೀಶರ ಮುಂದೆ ಹಾಜರುಪಡಿಸಿತ್ತು. ನ್ಯಾಯಾದೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದರು.
ಆದರೆ ಶುಕ್ರವಾರ ಬೆಳಗ್ಗೆಯೇ ಶಿವಮೂರ್ತಿ ಮುರುಘಾ ಶರಣರೂ ಎದೆ ನೋವು ಎಂದು ಹೇಳಿದ ನಂತರ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಕೋರ್ಟ್‌ಗೆ ಸ್ವಾಮೀಜಿಯನ್ನು ಹಾಜರು ಪಡಿಸಲು ಕೋರ್ಟ್ ಸೂಚನೆ ನೀಡಿತ್ತು. ಆರೋಪಿ ಸ್ವಾಮೀಜಿ ಪರ ವಕೀಲರು ಆನಾರೋಗ್ಯದ ವಿಚಾರ ತಿಳಿಸಿದ್ದಾರೆ. ಆದರೆ ಕೋರ್ಟ್‌ಗೆ ಸೂಕ್ತ ವೈದ್ಯಕೀಯ ವರದಿ ಸಲ್ಲಿಕೆ ಮಾಡದ ಹಿನ್ನಲೆ ಕೋರ್ಟ್ ಪೊಲೀಸ್ ಮತ್ತು ಆರೋಪಿ ಪರ ವಕೀಲರ ವಿರುದ್ಧ ಅಸಮಧಾನ ವ್ಯಕ್ತಪಡಿಸಿ ಸ್ವಾಮೀಜಿಯನ್ನು ಕೋರ್ಟ್‌ಗೆ ಹಾಜರು ಪಡಿಸಲು ಆದೇಶಿಸಿತ್ತು.

ನ್ಯಾಯಾದೀಶರ ಆದೇಶದ ನಂತರ ಶ್ರೀಗಳನ್ನು ನೇರವಾಗಿ ಐಸಿಯು ನಿಂದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಿಗಿ ಭದ್ರತೆಯಲ್ಲಿ ಹಾಜರುಪಡಿಸಿಲಾಗಿತ್ತು. ವಿಚಾರಣೆ ವೇಳೆ ಸ್ವಾಮೀಜಿ ಆರೋಗ್ಯದ ಬಗ್ಗೆ ಸೂಕ್ತ ವೈದ್ಯಕೀಯ ವರದಿಗಳನ್ನು ಕೋರ್ಟ್‌ಗೆ ವಕೀಲರು ನೀಡದ ಹಿನ್ನಲೆ ನ್ಯಾಯಾದೀಶರು ಆರೋಪಿ ಸ್ವಾಮೀಜಿಯನ್ನು 4 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೂಚನೆ ನೀಡಿದ್ದಾರೆ.
ಪೊಲೀಸ್ ಕಸ್ಟಡಿಗೆ ನೀಡುತ್ತಿದ್ದಂತೆ ಕಣ್ಣೀರಿಟ್ಟ ಶ್ರೀ
ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡುತ್ತಿದ್ದಂತೆ ಮುರುಘಾ ಶರಣರು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಸ್ವಾಮೀಜಿಗೆ ಇರುವ ಆನಾರೋಗ್ಯ ಸಮಸ್ಯೆಯನ್ನು ನ್ಯಾಯಾಯಲದ ಮುಂದೆ ಸಾಬೀತುಪಡಿಸುವಲ್ಲಿ ವಕೀಲರು, ಜೈಲು ಅಧಿಕಾರಿಗಳು ವಿಫಲರಾಗಿದ್ದಾರೆ. ಹಾಗಾಗಿ ನ್ಯಾಯಾದೀಶರು ಸ್ವಾಮೀಜಿಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಒಂದು ವೇಳೆ ಕಸ್ಟಡಿಯಲ್ಲಿದ್ದ ವೇಳೆ ಆನಾರೋಗ್ಯದ ಬಗ್ಗೆ ಹೇಳಿಕೊಂಡರೆ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸುವ ಸಾಧ್ಯತೆಯಿದೆ.
ಬೆಂಗಳೂರಿಗೆ ಚಿಕಿತ್ಸೆಗೆ ತೆರಳಲು ಸಿದ್ಧತೆಯಲ್ಲಿದ್ದ ಶ್ರೀಗಳು
ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಚಿಕಿತ್ಸೆ ಪಡೆಯುತ್ತಿದ್ದ ಮುರುಘಾ ಶರಣರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಲು ಮುಂದಾಗಿದ್ದರು. ಆದರೆ ನ್ಯಾಯಾಂಗ ಬಂಧನದಲ್ಲಿದ್ದ ವೇಳೆ ನ್ಯಾಯಾಲಯದ ಅನುಮತಿಯಿಲ್ಲದೆ ಚಿಕಿತ್ಸೆ ಕೊಡಿಸಿದ್ದರಿಂದ ನ್ಯಾಯಾದೀಶರು ಜೈಲು ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿ, ತಕ್ಷಣವೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದ್ದರು.












Click it and Unblock the Notifications