ಚಿತ್ರದುರ್ಗದ ನೂತನ ಡಿಸಿಯಾಗಿ ದಿವ್ಯ ಪ್ರಭು; ಸಿಇಓಯಾಗಿ ದಿವಾಕರ್ ಅಧಿಕಾರ ಸ್ವೀಕಾರ
ಚಿತ್ರದುರ್ಗ, ಅಕ್ಟೋಬರ್ 22: ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ ನೇಮಕಗೊಂಡಿದ್ದಾರೆ. ಜಿಲ್ಲೆಯ ಸಿಇಓ ಆಗಿ ಎಂ.ಎಸ್ ದಿವಾಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಕವಿತಾ ಎಸ್ ಮನ್ನಿಕೆರಿ ಹಾಗೂ ಸಿಇಓ ಆಗಿದ್ದ ಡಾ. ನಂದಿನಿ ದೇವಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ ಅವರು ದಿವ್ಯ ಪ್ರಭು ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದ ಮುಂದಿನ ಆದೇಶದ ವರೆಗೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇನ್ನು ಹೆಚ್ಚುವರಿ ಕೃಷಿ ನಿರ್ದೇಶಕರು, ಕೃಷಿ ಸಚಿವಾಲಯ, ಬೆಂಗಳೂರು, ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಎಂ.ಎಸ್.ದಿವಾಕರ್ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ಎಂ.ಎಸ್. ದಿವಾಕರ್ ಅವರ ಪರಿಚಯ ಇಲ್ಲಿದೆ.
ಐಎಎಸ್ ಅಧಿಕಾರಿ ಎಂ.ಎಸ್. ದಿವಾಕರ್ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಗಂಗನಕಟ್ಟೆ ಗ್ರಾಮದವರು. ದಿವಾಕರ್ ಅವರ ತಂದೆ ಶಿಕ್ಷಕರಾಗಿದ್ದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗಂಗನಕಟ್ಟೆಯಲ್ಲಿ ಮುಗಿಸಿರುವ ದಿವಾಕರ್, ಪ್ರೌಢಶಾಲೆ ಮತ್ತು ಪಿಯುಸಿಯನ್ನು ಪಕ್ಕದ ಗ್ರಾಮಗಳಲ್ಲಿ ಮುಗಿಸಿರುತ್ತಾರೆ. ನಂತರ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ (ಕೃಷಿ) ಪದವಿಯಲ್ಲಿ ಬಂಗಾರದ ಪದಕ ಪಡೆಯುದರೊಂದಿಗೆ ಮಗಿಸಿರುತ್ತಾರೆ. ಎಂಎಸ್ಸಿಯನ್ನು (ಕೃಷಿ) ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಮುಗಿಸಿರುತ್ತಾರೆ. ಕಾಲೇಜು ಮುಗಿಸಿದ ತಕ್ಷಣವೇ ಕೃಷಿ ಇಲಾಖೆಯಲ್ಲಿ 2002ರಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಆಯ್ಕೆಯಾಗೊಳ್ಳುತ್ತಾರೆ. ಮುಂದೆ ಉಪ ಕೃಷಿ ನಿರ್ದೇಶಕರಾಗಿ ಮತ್ತು ಜಂಟಿ ಕೃಷಿ ನಿರ್ದೇಶಕ ರಾಗಿ ಬಡ್ತಿ ಪಡೆದು ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಅಪರ ಕೃಷಿ ನಿರ್ದೇಶಕರಾಗಿ ಬಡ್ತಿ ಪಡೆದು ಬೆಂಗಳೂರು ಕೃಷಿ ಆಯುಕ್ತಾಲಯ ಹೆಚ್ಚುವರಿ ಕೃಷಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಈ ನಡುವೆ ಕೃಷಿ ಇಲಾಖೆಯಲ್ಲಿ k-kisan ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಇಲಾಖೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಶ್ರಮ ವಹಿಸಿರುತ್ತಾರೆ. ಹೀಗಾಗಿ ಕರ್ನಾಟಕ ಸರ್ಕಾರ ಇವರ ಕಾರ್ಯವೈಖರಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರದ ಯುಪಿಎಸ್ಸಿಗೆ ಅವರನ್ನು ಮೌಖಿಕ ಪರೀಕ್ಷೆಗೆ ಪರಿಗಣಿಸುವಂತೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಡಿಸೆಂಬರ್ ತಿಂಗಳಲ್ಲಿ ನಡೆದ ಮೌಖಿಕ ಪರೀಕ್ಷೆಯಲ್ಲಿ ದಿವಾಕರ್ ಎಂಎಸ್ ಇವರು ಐಎಎಸ್ ಹುದ್ದೆಗೆ ಆಯ್ಕೆಗೊಂಡು ಇದೀಗ ಚಿತ್ರದುರ್ಗಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.












Click it and Unblock the Notifications