ಜಲಜೀವನ್ ಮಿಷನ್: ರಾಜ್ಯದ 90 ಲಕ್ಷ ಮನೆಗಳಿಗೆ ನೀರು; ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ
ಚಿತ್ರದುರ್ಗ, ನವೆಂಬರ್ 3: "ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳ ನೀರು ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು," ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮುತ್ತುಗದೂರು ಗ್ರಾಮದ ಟಿ.ಬಿ. ಸರ್ಕಲ್ ತರಳಬಾಳು ನಗರದಲ್ಲಿ ಬುಧವಾರ ಜಲಜೀವನ್ ಮಿಷನ್ ಯೋಜನೆಯಡಿ ನಿರ್ವಹಿಸಿರುವ ಕಾರ್ಯಾತ್ಮಕ ನಳನೀರು ಸಂಪರ್ಕದ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, "ಪ್ರತಿ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಜಲ ಜೀವನ ಮಿಷನ್ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಈಗಾಗಲೇ ಕಾಮಗಾರಿ ನಡೆಯುತ್ತಿದೆ," ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಶೇ.50ರ ಅನುಪಾತದಲ್ಲಿ ಕ್ರಿಯಾಯೋಜನೆ ತಯಾರಿಸಲಾಗಿದ್ದು, 2024ರೊಳಗೆ ರಾಜ್ಯದ 90 ಲಕ್ಷ ಮನೆಗಳಿಗೆ ನಳನೀರು ಸಂಪರ್ಕಿಸುವ ಕಾಮಗಾರಿ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.

"ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮುರು, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕು ಸೇರಿದಂತೆ ಒಟ್ಟು ಆರು ತಾಲ್ಲೂಕುಗಳಿಂದ 516 ರೂ. ಕೋಟಿಯಷ್ಟು ಕಾಮಗಾರಿಗಳಿಗೆ ಕ್ರಮಕೈಗೊಳ್ಳಲಾಗಿದ್ದು, ಚಿತ್ರದುರ್ಗ ಜಿಲ್ಲೆಯ 3,46,186 ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಕಾಮಗಾರಿ ಶುರುವಾಗಿದೆ," ಎಂದು ಹೇಳಿದರು.
"ಚಿತ್ರದುರ್ಗ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 6865 ಮನೆಗಳಿಗೆ ನಳ ಸಂಪರ್ಕಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗಿದ್ದು, ಜನವರಿ-2022ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು," ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಮಾತನಾಡಿ, "ಜಲಜೀವನ್ ಮಿಷನ್ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕಿನ 22 ಜನವಸತಿಗಳು ಹೊಳಲ್ಕೆರೆ ತಾಲ್ಲೂಕಿನ 7 ಜನವಸತಿಗಳ ಒಟ್ಟು 6865 ಮನೆಗಳಿಗೆ 11.14 ಕೋಟಿ ರೂ. ವೆಚ್ಚದಲ್ಲಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಕಾಮಗಾರಿಗಳನ್ನು ಟೆಂಡರ್ ಪ್ರಕಾರ ಗುತ್ತಿಗೆದಾರರಿಗೆ ವಹಿಸಲಾಗಿದ್ದು, ಈವರಗೆ ಒಟ್ಟು 6 ಜನವಸತಿಗಳಲ್ಲಿನ ನಳ ಸಂಪರ್ಕ ಪೂರ್ಣಗೊಂಡಿರುತ್ತದೆ ಎಂದರು. ಉಳಿದ ಕಾಮಗಾರಿಗಳಲ್ಲಿ 3 ಜನವಸತಿಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ," ಎಂದರು.

"2021-22ನೇ ಸಾಲಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯ 682 ಜನವಸತಿಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಚಳ್ಳಕೆರೆ ತಾಲ್ಲೂಕಿನ 341 ಜನವಸತಿಗಳು, ಚಿತ್ರದುರ್ಗ ತಾಲ್ಲೂಕಿನ 72 ಜನವಸತಿಗಳು, ಹಿರಿಯೂರು ತಾಲ್ಲೂಕಿನ 116 ಜನವಸತಿಗಳು, ಹೊಳಲ್ಕೆರೆ ತಾಲ್ಲೂಕಿನ 18 ಜನವಸತಿಗಳು ಹಾಗೂ ಮೊಳಕಾಲ್ಮೂರು ತಾಲ್ಲೂಕಿನ 135 ಜನವಸತಿಗಳನ್ನು ತೆಗೆದುಕೊಳ್ಳಲಾಗಿದೆ. 2021-22ನೇ ಸಾಲಿನ ಕಾಮಗಾರಿಗಳ ಮೊತ್ತ 237 ಕೋಟಿ ರೂ.ಗಳಾಗಿದ್ದು, ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ," ಎಂದು ಮಾಹಿತಿ ನೀಡಿದರು.
2022-23ನೇ ಸಾಲಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 885 ಜನವಸತಿಗಳನ್ನು ತೆಗೆದುಕೊಂಡಿದ್ದು, ಚಿತ್ರದುರ್ಗ ತಾಲ್ಲೂಕಿನ 173 ಜನವಸತಿಗಳು, ಹಿರಿಯೂರು ತಾಲ್ಲೂಕಿನ 168 ಜನವಸತಿಗಳು, ಹೊಳಲ್ಕೆರೆ ತಾಲ್ಲೂಕಿನ 198 ಜನವಸತಿಗಳು, ಹೊಸದುರ್ಗ ತಾಲ್ಲೂಕಿನ 346 ಜನವಸತಿಗಳನ್ನು ತೆಗೆದುಕೊಳ್ಳಲಾಗಿದೆ. ಈ ಕಾಮಗಾರಿಗಳ ಅಂದಾಜು ಮೊತ್ತ 266.02 ಕೋಟಿ ರೂ.ಗಳಾಗಿರುತ್ತದೆ.
ಮುತ್ತಗದೂರು ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವರು, ಯೋಜನೆಯ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಪಡೆದರು.
"ಜಲಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಯುತ್ತಿದೆ. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕಾಗಿ ಸಾರ್ವಜನಿಕರು ವಂತಿಗೆ ನೀಡಬೇಕಾಗಿದೆ. ಸಾರ್ವಜನಿಕರು ಪಾವತಿಸುವ ವಂತಿಗೆಯನ್ನು ಕಡಿಮೆ ಮಾಡಬೇಕು, ಸಾಸಲು ಗ್ರಾಮಕ್ಕೆ ಕಚ್ಚಾ ನೀರು ಬರುತ್ತಿವೆ. ಸಾಸಲು ಗ್ರಾಮಕ್ಕೆ ಶುದ್ಧ ನೀರು ಪೂರೈಸಬೇಕು," ಎಂದು ಮುತ್ತುಗದೂರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, "ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಜಲಜೀವನ್ ಮಿಷನ್ ಯೋಜನೆಯಡಿ ನಡೆಯುವ ಕಾಮಗಾರಿಯನ್ನು ಪ್ರತಿನಿತ್ಯವೂ ಪರಿಶೀಲಿಸಬೇಕು. ಯಾವುದೇ ಸಮಸ್ಯೆಯಾಗದಂತೆ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಾಸಲು ಗ್ರಾಮಕ್ಕೆ ತಾತ್ಕಾಲಿಕವಾಗಿ ಕಚ್ಚಾ ನೀರು ಬರುತ್ತಿವೆ. ಈ ಬಗ್ಗೆ ಕ್ರಮವಹಿಸಿ ಶುದ್ಧ ನೀರು ಪೂರೈಸಲಾಗುವುದು. ಸಾರ್ವಜನಿಕರು ಪಾವತಿಸುವ ವಂತಿಗೆಯನ್ನು ಕಡಿಮೆಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮವಹಿಸಲಾಗುವುದು," ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುತ್ತುಗದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರವೀಣ ಗೋಡೆಮನೆ, ಉಪಾಧ್ಯಕ್ಷೆ ಗಿರಿಜಮ್ಮ ಮಹೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಜ್ಞಾನೇಶ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ಎಸ್.ನಾಡರ್, ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಗಂಗಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್, ಗುತ್ತಿಗೆದಾರ ನಾಗೇಶ್ವರ್ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications