ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ್ ನಾಮಪತ್ರ ಸಲ್ಲಿಕೆ; ಬಿಜೆಪಿ ಅಭ್ಯರ್ಥಿಗೆ ಸೋಲಿನ ಭೀತಿ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 7: ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28ರಂದು ನಡೆಯಲಿದ್ದು, ಬಿಜೆಪಿಗೆ ಸಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದ ಶಾಸಕಿ ಕೆ ಪೂರ್ಣಿಮಾ ಅವರ ಪತಿ ಡಿಟಿ ಶ್ರೀನಿವಾಸ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರ ಜೊತೆಗೆ ಡಾ. ಹಾಲನೂರು ಎಸ್. ಲೇಪಾಕ್ಷಿ ಕೂಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರಿಗೆ ಸೋಲಿನ ಭೀತಿ ಎದುರಾಗಿದೆ.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಡಿ.ಟಿ.ಶ್ರೀನಿವಾಸ್ ಅ.7ಕ್ಕೆ ನಾಮಪತ್ರ ಸಲ್ಲಿಕೆಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಡಿ.ಟಿ.ಶ್ರೀನಿವಾಸ್ ಅ.7ಕ್ಕೆ ನಾಮಪತ್ರ ಸಲ್ಲಿಕೆ

ಶಾಸಕಿ ಕೆ. ಪೂರ್ಣಿಮಾ ಪತಿ ಶ್ರೀನಿವಾಸ್ ಬಿಜೆಪಿಯ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದರು. ಟಿಕೆಟ್ ತಪ್ಪಿದಾಗಿಂದಲೂ ಅವರು ಪಕ್ಷಕ್ಕೆ ಸಡ್ಡು ಹೊಡೆಯುವ ಸೂಚನೆ ನೀಡಿದ್ದರು. ಅಂತಿಮವಾಗಿ ಇಂದು ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಇಳಿದಿದ್ದಾರೆ. ಇವರ ಜೊತೆಗೆ ಡಾ. ಹಲನೂರು ಎಸ್, ಲೇಪಾಕ್ಷಿ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಂ. ಚಿದಾನಂದ ಗೌಡಗೆ ಬಹುತೇಕ ಸೋಲಿನ ಭೀತಿ ಎದುರಾಗಿದೆ.

Chitradurga: DT Srinivas Filed Nomination As Independent Candidate In South East Graduates Constituency Election

ಗೊಲ್ಲ ಮತ್ತು ಲಿಂಗಾಯತ ಮತಗಳು ನಿರ್ಣಾಯಕ: ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೊಲ್ಲ ಮತ್ತು ಲಿಂಗಾಯತ ಮತಗಳೇ ನಿರ್ಣಾಯಕ ಪಾತ್ರ ವಹಿಸುತ್ತದೆ. ಗೊಲ್ಲ ಸಮುದಾಯಕ್ಕೆ ಸೇರಿದ ಡಿ.ಟಿ. ಶ್ರೀನಿವಾಸ್ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಡಾ. ಹಾಲನೂರು ಎಸ್ ಲೇಪಾಕ್ಷಿ ತಮ್ಮ ಸಮುದಾಯದ ಮತಗಳನ್ನು ಸೆಳೆಯಲಿದ್ದಾರೆ.

ಐದು ಜಿಲ್ಲೆಗಳಲ್ಲಿ ಡಿ.ಟಿ. ಶ್ರೀನಿವಾಸ್ ಜನರಿಗೆ ಚಿರಪರಿಚಿತರಾಗಿದ್ದು ಹೆಚ್ಚಿನ ಮತಗಳು ಲಭಿಸುವ ನಿರೀಕ್ಷೆಯಿದೆ. ಬಿಜೆಪಿ ನೆಚ್ಚಿಕೊಂಡಿರುವ ಲಿಂಗಾಯತ ಮತಗಳು ಎಸ್ ಲೇಪಾಕ್ಷಿ ಪಾಲಾಗಿ ಬಿಜೆಪಿ ಅಭ್ಯರ್ಥಿ ಠೇವಣಿ ಕಳೆದುಕೊಂಡರು ಅಚ್ಚರಿ ಪಡುವಂತಿಲ್ಲ.

Chitradurga: DT Srinivas Filed Nomination As Independent Candidate In South East Graduates Constituency Election

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ: ಆಗ್ನೇಯ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಬಹುತೇಕ ಕಡಿಮೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳೇ ಪ್ರತಿ ಬಾರಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರಮೇಶ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಎಂ. ಚಿದಾನಂದ ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ಅಖಾಡಕ್ಕೆ ಇಳಿದಿದ್ದಾರೆ.

Recommended Video

Hathras Case : UP ಅತ್ಯಾಚಾರ ಪ್ರಕರಣದ ವರದಿ ಸಿಗೋದು ಇನ್ನಷ್ಟು ತಡವಾಗಬಹುದು | Oneindia Kannada

ಒಟ್ಟಾರೆ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಮತ್ತು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ. ಶ್ರೀನಿವಾಸ್ ಮಧ್ಯೆ ನೇರ ಪೈಪೋಟಿ ನಡೆಯುತ್ತಿದ್ದು, ಇವರಿಬ್ಬರಲ್ಲಿ ಗೆಲುವು ಸಾಧಿಸುವವರು ಯಾರು ಎಂದು ಕಾದು ನೋಡಬೇಕಿದೆ.

English summary
DT Srinivas filed his nomination as independent candidate in South East Graduates Constituency election today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X