ಚಿತ್ರದುರ್ಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆ

ಚಿತ್ರದುರ್ಗ, ಜುಲೈ 13: ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆಯಾದಂತಾಗಿದೆ.

ಇಂದಿನ ವರದಿಯಲ್ಲಿ ಎಂಟು ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು 120 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯ ಒಟ್ಟು 120 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 83 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 36 ಸಕ್ರಿಯ ಪ್ರಕರಣಗಳು ಇವೆ. ಒಬ್ಬರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

Eight Coronavirus Positive Cases Confirmed Today In Chitradurga

ಸದ್ಯ ಜಿಲ್ಲೆಯಲ್ಲಿ ಒಟ್ಟು 32 ಕಂಟೈನ್ಮೆಂಟ್ ವಲಯಗಳಿವೆ. ಒಟ್ಟು 1994 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 2900 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ 9146 ಜನರ ಮಾದರಿ ಸಂಗ್ರಹಿಸಲಾಗಿದ್ದು, 6065 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+