ಐತಿಹಾಸಿಕ ಪ್ರವಾಸಿ ತಾಣ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭೇಟಿ ನೀಡಬೇಕೆ?-ಮಾರ್ಗಗಳ ವಿವರ ಇಲ್ಲಿದೆ

Vani Vilasa Sagara Dam: ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇನ್ನು ಈ ವೇಳೆಯೇ ಜಲಾಶಯಕ್ಕೆ ಪ್ರವಾಸಿಗರು ಭೇಟಿ ನೀಡಲು ಉತ್ತಮ ಸಮಯವಾಗಿದ. ಹಾಗಾದರೆ ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.

ಜಲಾಶಯದಲ್ಲಿ 113 ಅಡಿ ಇದ್ದ ನೀರು ಇದೀಗ 122ಕ್ಕೆ ಏರಿಕೆ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿತ್ತು. ಇದೀಗ 910 ಕ್ಯೂಸೆಕ್ ಒಳಹರಿವಿಗೆ ಇಳಿಕೆ ಕಂಡಿದೆ.

Explore the Historic Tourist spot Vani Vilasa Sagara Dam Know Route details

ಭದ್ರಾ ಜಲಾಶಯದಿಂದ ಪ್ರತಿದಿನ 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರ ಜೊತೆಗೆ ಮಳೆ ನೀರು ಕೂಡ ಸೇರಿಕೊಂಡು ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಚೆಕ್ ಮೂಲಕ ಜಲಾಶಯಕ್ಕೆ ನೀರು ಹರಿದು ಬರುತ್ತಿತ್ತು. ಕಳೆದ ವರ್ಷ ಮಳೆ ಇಲ್ಲದ ಕಾರಣ ಜಲಾಶಯಕ್ಕೆ ಯಾವುದೇ ರೀತಿಯ ಒಳಹರಿವು ನೀರು ಹರಿದು ಬಂದಿರಲಿಲ್ಲ. ಪ್ರಸಕ್ತ ಸಾಲಿನ ಸುಮಾರು 10 ಅಡಿಗಳಷ್ಟು ನೀರು ಬಂದಿದೆ.

ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚು ಇರುವುದರಿಂದ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಜನತೆಗೆ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ಬೇಸಿಗೆ ಹಂಗಾಮಿನಲ್ಲಿ ಎಡ ಮತ್ತು ಬಲನಾಲೆ ಮೂಲಕ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಹರಿಸಲಾಗುತ್ತದೆ.

ಹಳೆಯ ಅಣೆಕಟ್ಟುಗಳಲ್ಲಿ ವಾಣಿ ವಿಲಾಸ ಸಾಗರ ಡ್ಯಾಂ ಕೂಡ ಒಂದಾಗಿದೆ ಎನ್ನಬಹುದು. 1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 115 ವರ್ಷಗಳ ಕಾಲ ಇತಿಹಾಸವಿದೆ. 1935ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹವಾಗುವ ಮೂಲಕ ಮೊದಲ ಬಾರಿಗೆ ಡ್ಯಾಂ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು.

ಬಳಿಕ ಕಳೆದ ವರ್ಷ 2022ರಲ್ಲಿ ಎರಡನೇ ಬಾರಿಗೆ 135 ಅಡಿ ನೀರು ಸಂಗ್ರಹವಾಗಿ ಡ್ಯಾಂ ಕೋಡಿ ಬಿದ್ದು ಐತಿಹಾಸಿಕ ಸಾಧನೆಗೆ ಕಾರಣವಾಗಿತ್ತು. ಈ ವರ್ಷದಲ್ಲಿ 8 ಅಡಿ ನೀರು ಬಂದರೆ ಡ್ಯಾಂ ಕೋಡಿ ಬೀಳಲಿದೆ.

ಹೆಚ್ಚು ನೀರು ಸಂಗ್ರಹವಾದ ವರ್ಷ: 1933ರಲ್ಲಿ 135.25 ಅಡಿ ನೀರು ಸಂಗ್ರಹ ಆಗಿದ್ದು, 1934ರಲ್ಲಿ 130.24 ಅಡಿ ನೀರು ಹರಿದು ಬಂದಿತ್ತು. 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2021ರಲ್ಲಿ 125.50 ಅಡಿ 2022ರಲ್ಲಿ 135 ಅಡಿ ನೀರು ಸಂಗ್ರಹ ಆಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ.

ಪ್ರವಾಸಿಗರನ್ನು ಸೆಳೆಯುತ್ತಿರುವ ವಿವಿ ಸಾಗರ: ವಾಣಿ ವಿಲಾಸ ಜಲಾಶಯವನ್ನು ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶ ಮಾಡಬಹುದು.

ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 4ರ ಬಲಭಾಗದ ವಾಣಿ ವಿಲಾಸ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಬಹುದು. ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಪ್ರವಾಸಿಗರು ಹೊಸದುರ್ಗದಿಂದ ಹಿರಿಯೂರು ಮಾರ್ಗವಾಗಿ ಬಲಭಾಗದ ಮೂಲಕ ತೆರಳಿ ಡ್ಯಾಂ ವೀಕ್ಷಣೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+