ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸದುರ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ವಿಭಿನ್ನ ಪ್ರತಿಭಟನೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 27: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆ, ಕನ್ನಡಪರ ಸಂಘಟನೆ ಹಾಗೂ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ನಡೆಸುತ್ತಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯ ರೈತ ಸಂಘದ ಮುಖಂಡ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ಸೋಮವಾರ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.

Chitradurga: Farmers Put Onion Garland To Narendra Modi Photo During Bharat Bandh Protest In Hosadurga

ಪ್ರತಿಭಟನೆ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಇದಲ್ಲದೆ ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾಗಿರುವ ಘಟನೆ ನಡೆಯಿತು.

Chitradurga: Farmers Put Onion Garland To Narendra Modi Photo During Bharat Bandh Protest In Hosadurga

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ರೈತರು ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈರುಳ್ಳಿ ಬೆಳೆದ ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈರುಳ್ಳಿಯನ್ನು ರಸ್ತೆಗೆ ಸುರಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು.

Chitradurga: Farmers Put Onion Garland To Narendra Modi Photo During Bharat Bandh Protest In Hosadurga

ಚಿತ್ರದುರ್ಗ ಜಿಲ್ಲೆಯಲ್ಲಿ ಅಂಗಡಿ- ಮುಂಗಟ್ಟುಗಳು ಕೆಲಕಾಲ ಸ್ವಯಂಪ್ರೇರಿತವಾಗಿ ಮುಚ್ಚಿ ನಂತರ ಎಂದಿನಂತೆ ವಹಿವಾಟು ನಡೆಸಿದರು. ಭಾರತ ಬಂದ್ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ಮತ್ತಿತರ ಸಂಘಟನೆಗಳು ಭಾಗವಹಿಸಿದ್ದವು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Recommended Video

ನಮ್ಮಿಂದ ಆಗುತ್ತಿಲ್ಲ ಅಂತ ಸೋಲಿನ ನಂತರ ರೋಹಿತ್ ಶರ್ಮಾ ಹೇಳಿದ್ದು ಯಾಕೆ? | Oneindia Kannada

English summary
Farmers Put Onion Garland To Narendra Modi Photo during Bharat Bandh Protest in Hosadurga Of Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X