ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ತಂದೆ ಹೃದಯಾಘಾತದಿಂದ ನಿಧನ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯಾಗಿರುವ ಅನಿಲ್ ಶರಣಾದ ಹಿನ್ನೆಲೆಯಲ್ಲಿ, ಆರೋಪಿ ತಂದೆ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ನಟ ದರ್ಶನ್ ಮತ್ತು ಅವರ ಟೀಂ ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನ ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚಿತ್ರದುರ್ಗದ ನಾಲ್ವರು ಆರೋಪಿಗಳು ಭಾಗಿಯಾಗಿದ್ದರು.

ಕಾರು ಚಾಲಕ ರವಿ ಗುರುವಾರ ಪೊಲೀಸರಿಗೆ ಶರಣಾಗಿದ್ದಾನೆ ಇದರ ಬೆನ್ನಲ್ಲೇ ಆರನೇ ಆರೋಪಿ ಜಗದೀಶ್ ಹಾಗೂ 7ನೇ ಆರೋಪಿಯಾಗಿರುವ ಅನಿಲ್ ಇಂದು ಚಿತ್ರದುರ್ಗದ ಡಿವೈಎಸ್ಪಿ ದಿನಕರನ್ ಮುಂದೆ ಶರಣಾಗಿದ್ದರು. ಮಗ ಪ್ರಕರಣದಲ್ಲಿ ಸಿಕ್ಕಿಕೊಂಡ ಘಟನೆಯಿಂದ ಆಘಾತಕ್ಕೆ ಒಳಗಾದ ಅನಿಲ್ ತಂದೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನಲಾಗಿದೆ.
ಎಲ್ಲಾ 17 ಆರೋಪಿಗಳ ಬಂಧನ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 17 ಆರೋಪಿಗಳನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ದರ್ಶನ್ ವಿರುದ್ಧ ಸಾಕ್ಷಿಗಳು ಪ್ರಬಲವಾಗಿದ್ದು, ಅವರು ಈ ಪ್ರಕರಣದಿಂದ ಹೊರಬರುವುದು ಕಠಿಣ ಎನ್ನಲಾಗಿದೆ. ಜಾಮೀನು ಸಿಗಲು ಕನಿಷ್ಠ 6 ತಿಂಗಳು ಬೇಕಾಗುತ್ತದೆ ಎಂದು ಮಾಜಿ ಪೊಲೀಸರು, ಕಾನೂನು ತಜ್ಞರು ಹೇಳಿದ್ದಾರೆ.
ಜೀವ ತೆಗೆದ ಅಶ್ಲೀಲ ಮೆಸೇಜ್
ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳಿಸಿದ್ದೇ ಕೊಲೆಗೆ ಕಾರಣವಾಗಿದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದ ಬೆಂಗಳೂರಿಗೆ ಕರೆಸುವಂತೆ ದರ್ಶನ್ ಸೂಚನೆ ನೀಡಿದ್ದರು ಎಂದು ಆರೋಪಿಗಳು ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ. ಪವಿತ್ರಾ ಗೌಡ ತನಗೆ ಅಶ್ಲೀಲ ಮೆಸೇಜ್ ಬರುತ್ತಿರುವ ಸಂಗತಿಯನ್ನು ಮನೆಯ ಕೆಲಸದವನಿಗೆ ತಿಳಿಸಿದ್ದು, ಆತನಿಂದ ದರ್ಶನ್‌ಗೆ ಈ ವಿಚಾರ ಗೊತ್ತಾಗಿದೆ.
ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿಯನ್ನು ಕರೆಸಿಕೊಂಡ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಿದ್ದು, ರೇಣುಕಾಸ್ವಾಮಿ ಮೃತಪಟ್ಟಿರುವುದಾಗಿ ವರದಿಯಾಗಿದೆ.












Click it and Unblock the Notifications