ಹಿರಿಯೂರು: ಹೆದ್ದಾರಿಯಲ್ಲಿ ಇದ್ದಕಿದ್ದಂತೆ ಧಗಧಗಿಸಿದ ಕಾರು, ಮುಂದಾಗಿದ್ದೇನು ನೀವೇ ಗಮನಿಸಿ

ಹಿರಿಯೂರು, ಡಿಸೆಂಬರ್‌, 25: ನಗರದ ವಿವಿ ಸಾಗರ ತಿರುವಿನ ಬಳಿಯಿರುವ ರಂಗಪ್ಪ ಡಾಬಾ ಹತ್ತಿರ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಸೋಮವಾರ (ಡಿಸೆಂಬರ್‌ 25) ಮದ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹೊನ್ನಾಳಿ ಮೂಲದ ರಮೇಶಚಾರಿ ಎನ್ನುವವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Fire in moving car Near hiriyur today

ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ

ಕಾರು ಹಾಗೂ ಟಿಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸೇರಿದಂತೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ.

ಇನ್ನು ಆನೇಕಲ್ ತಾಲೂಕಿನ ನಿವಾಸಿ ಮಾಲಾ ತೀವ್ರ ಗಾಯಗೊಂಡು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆನೇಕಲ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಟಿಟಿ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಟಿಟಿಯಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ತೀವ್ರ ಗಾಯಗೊಂಡಿದ್ದ ಆನೇಕಲ್ ಗ್ರಾಮದ ನಿವಾಸಿ ಹರೀಶ್ ಅವರ ಪತ್ನಿ ಮಾಲಾ ಅವರನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಇವರ ಇಬ್ಬರು ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದಂತೆ ಟಿಟಿ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರು ಸಹ ಗಾಯಗೊಂಡಿದ್ದು, ಸಮೀಪದ ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+