ಕೋಟೆ ನಾಡು ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಗೆ ಮೊದಲ ಸಾವು
ಚಿತ್ರದುರ್ಗ, ಜುಲೈ 12: ಕೋಟೆನಾಡು ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಗೆ ಮೊದಲ ಸಾವಾಗಿದ್ದು, ಹಿರಿಯೂರು ನಗರದ 75 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಹಿರಿಯೂರು ನಗರದ ಬ್ಯಾಂಗಲ್ ಸ್ಟೋರ್ ಮಾಲೀಕನ ಪ್ರಾಥಮಿಕ ಸಂಪರ್ಕದಲ್ಲಿದ್ದ 75 ವರ್ಷದ ತಾಯಿ ಮತ್ತು ಮಗನಿಗೆ ಇಂದು ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿತ್ತು.
75 ವರ್ಷದ ವೃದ್ಧೆ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶನಿವಾರ ವೃದ್ಧೆಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ವೃದ್ಧೆಯನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ ವೃದ್ಧೆ ಮೃತಪಟ್ಟಿರುವುದು ತಿಳಿದು ಬಂದಿದೆ.
ಕೋಟೆನಾಡು ಚಿತ್ರದುರ್ಗದಲ್ಲಿ ಶನಿವಾರ 5 ಜನರಿಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದ್ದು, ಕೊರೊನೊ ವೈರಸ್ ಸೋಂಕಿತರ ಸಂಖ್ಯೆ 103 ಕ್ಕೆ ಏರಿಕೆಯಾಗಿದೆ. ಹಿರಿಯೂರಿನಲ್ಲಿ 4, ಚಿತ್ರದುರ್ಗದಲ್ಲಿ 1 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹಿರಿಯೂರಿನ 56 ವರ್ಷದ ಪುರುಷ, 44 ವರ್ಷದ ಮಹಿಳೆ, 54 ವರ್ಷದ ಮಹಿಳೆ, 22 ವರ್ಷದ ಯುವಕ ಹಾಗೂ ಚಿತ್ರದುರ್ಗದ 39 ವರ್ಷದ ಪುರುಷನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದುವರೆಗೂ ಜಿಲ್ಲೆಯ ಒಟ್ಟು 103 ದೃಢಪಟ್ಟ ಪ್ರಕರಣಗಳಲ್ಲಿ 82 ಸೋಂಕಿತರು ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಉಳಿದ 21 ಸಕ್ರಿಯ ಪ್ರಕರಣಗಳು ಬಾಕಿ ಇದ್ದು, ಇದೀಗ ಹೊಸದಾಗಿ ಕೊರೊನಾ ಪಾಸಿಟಿವ್ ಪತ್ತೆಯಾದ 75 ವರ್ಷದ ವೃದ್ಧೆ ಸಾವನ್ನಾಪ್ಪಿದ್ದಾರೆ ಎನ್ನಲಾಗಿದೆ.












Click it and Unblock the Notifications