ಹಿರಿಯೂರು; ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಮಗು ಸೇರಿ ಐವರ ದುರ್ಮರಣ

ಚಿತ್ರದುರ್ಗ, ಆಗಸ್ಟ್‌ 12: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಐವರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ -4ರಲ್ಲಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ.

ಖಾಸಗಿ ಬಸ್ ವಿಜಯಪುರದ ನಂದಗುಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. .ಎ. 51 ಎಡಿ 7449 ನಂಬರಿನ ಕುಕ್ಕೆಶ್ರೀ ಟ್ರಾವೆಲ್ಸ್ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬಸ್ಸಿನಲ್ಲಿ 35 ಪ್ರಯಾಣಿಕರು ಇದ್ದರು. ಅದರಲ್ಲಿ ಮಗು ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ. ಗಾಯಗೊಂಡಿರುವ 30 ಜನರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ವಿಜಯಪುರ ಮೂಲದ ಶಿಲ್ಪಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3)ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

Chitradurga: Five Including Baby Burnt Alive In Private Bus At Hiriyur

ಸ್ಥಳಕ್ಕೆ ಹಿರಿಯೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸರು ತನಿಖೆ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+