ಚಿತ್ರದುರ್ಗದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
ಚಿತ್ರದುರ್ಗ, ಮಾರ್ಚ್, 23: ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿಪಿ.ಮೂಡಲಗಿರಿಯಪ್ಪ (85) ವರ್ಷ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು.
ಶಿಕ್ಷಣದ ವಿವರ: ಮೂಡಲಗಿರಿಯಪ್ಪ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದವರಾಗಿದ್ದು, ಜೂನ್ 24, 1940ರಂದು ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಸರ್ಕಾರಿ ಕಾನೂನು ಕಾಲೇಜು ಮತ್ತು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು (ಕರ್ನಾಟಕ)ದಿಂದ ಬಿಎ ಮತ್ತು ಬಿಎಲ್‌ನಲ್ಲಿ ಪೂರ್ಣಗೊಳಿಸಿದರು.

ಯಾವ್ಯಾವ ಕ್ಷೇತ್ರಗಳಲ್ಲಿ ಸೇವೆ?: 1989-1991ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ನಂತರ 1991-1996ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು. 1979 ಮತ್ತು 1982 ಜಿಲ್ಲಾ ಕಾಂಗ್ರೆಸ್ ಸಮಿತಿ (ಇಂದಿರಾ) ಡಿಸಿಸಿ (ಐ), ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1979 ಮತ್ತು 1989 ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಇಂದಿರಾ) ಪಿಸಿಸಿ (ಐ) ಕಾನೂನು ಕೋಶದ ಅಧ್ಯಕ್ಷರಾಗಿದ್ದರು.
ನಂತರ 1980 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಸಂವಿಧಾನ ತಿದ್ದುಪಡಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ 1985 ಮತ್ತು 1989 ಸಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾದರು. ಜೊತೆಗೆ ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದರು. 1989 ಹಾಗೂ 1991 ಚಿತ್ರದುರ್ಗದಿಂದ 9ನೇ ಲೋಕಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಇದರ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾದರು.
1991 ಮತ್ತು 1996 ಚಿತ್ರದುರ್ಗದಿಂದ 10ನೇ ಲೋಕಸಭೆಯಲ್ಲಿ ಸಂಸದರಾಗಿ ಜಯಗಳಿಸಿದರು. 1998, 1999ರಲ್ಲಿ ಚಿತ್ರದುರ್ಗದಿಂದ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಸಾರ್ವಜನಿಕ ವಿತರಣಾ ಸಮಿತಿಯ ಸದಸ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪಸಮಿತಿ-ಎ. ಸದನದ ಸಭೆಗಳಿಗೆ ಸದಸ್ಯರ ಗೈರುಹಾಜರಿ ಸಮಿತಿಯ ಸದಸ್ಯ, ಕಾರ್ಮಿಕ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿದ್ದರು. ಹೀಗೆ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.












Click it and Unblock the Notifications