S.Nijalingappa House: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಬಂಗ್ಲೆ ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಸೇಲ್
S.Nijalingappa House: ನಾಲ್ಕು ಬಾರಿ ಸಿಎಂ ಆಗಿದ್ದ ಚಿತ್ರದುರ್ಗದ ದಿವಂಗತ ಎಸ್.ನಿಜಲಿಂಗಪ್ಪ ಅವರ ಮನೆಯನ್ನು ಇಂದು (ಡಿಸೆಂಬರ್ 13) ಕೊನೆಗೂ ರಾಜ್ಯ ಸರ್ಕಾರ ಖರೀಸಿದೆ. ಹಾಗಾದರೆ ಎಷ್ಟು ರೂಪಾಯಿ ಖರೀಸಿದೆ ಹಾಗೂ ಎಷ್ಟು ಹೆಕ್ಟೇರ್‌ನಲ್ಲಿ ಮನೆ ಇದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 5,00,00,000 ರೂಪಾಯಿಗೆ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂಪಾಯಿ ಕಡಿಮೆ ಮೊತ್ತಕ್ಕೆ ಖರೀದಿಸಿದೆ ಎಂದು ತಿಳಿದುಬಂದಿದೆ.

ನಿಜಲಿಂಗಪ್ಪ ಅವರ ಮನೆ ಖರೀದಿಸಿ, ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಸಜ್ಜಾಗಿದೆ. ಈ ಉದ್ದೇಶದಿಂದ 5,00,00,000 ರೂಪಾಯಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, 2 ಕೋಟಿ ರೂಪಾಯಿ ಹಣವನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಖಾತೆಗೆ ಸರ್ಕಾರ ಬಿಡುಗಡೆ ಮಾಡಿದೆ ಎಂದು ಇತ್ತೀಚೆಗಷ್ಟೇ ಮಾಹಿತಿ ಲಭ್ಯವಾಗಿತ್ತು.
ಪುತ್ರ ಕಿರಣ್ ಶಂಕರ್ ನಿಜಲಿಂಗಪ್ಪ ಮನೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿದ್ದ ಹಿನ್ನೆಲೆ ಚಿತ್ರದುರ್ಗದ ಜಿಲ್ಲಾಧಿಕಾರಿ ನಿವಾಸದ ಬಳಿಯಿರುವ ಎಸ್.ನಿಜಲಿಂಗಪ್ಪ ನಿವಾಸವನ್ನು ಸರ್ಕಾರ ಇದೀಗ ಖರೀದಿ ಮಾಡಿದೆ.
ಎಐಸಿಸಿ ಮಾಜಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ರಾಜ್ಯದ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂಪಾಯಿ ಕಡಿಮೆ ಮೊತ್ತಕ್ಕೆ ಖರೀದಿ ಮಾಡಿದೆ ಎಂದು ತಿಳಿದುಬಂದಿದೆ.
ಎಸ್ ನಿಜಲಿಂಗಪ್ಪ ಅವರು ಬದುಕಿ ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್ಎನ್ ಕಿರಣಶಂಕರ್ ಮನೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.
ಇದೀಗ ಕೊನೆಗೂ 4 ವರ್ಷಗಳ ವಿಳಂಬದ ನಂತರ ರಾಜ್ಯ ಸರ್ಕಾರ ಮನೆ ಖರೀದಿಸಿದೆ. ಎಸ್ಎನ್ ಕಿರಣಶಂಕರ್ ಅವರು ಸ್ಥಳೀಯ ತಹಶೀಲ್ದಾರ್ ಮೂಲಕ ಮನೆಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದರು ಎಂದು ತಿಳಿದುಬಂದಿದೆ. ಕಿರಣಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ವಾಸ್ತುಶಿಲ್ಪಿಯಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.
4 ವರ್ಷಗಳ ಹಿಂದೆಯೇ ಮನೆಯನ್ನು ಸರ್ಕಾರಕ್ಕೆ ಮಾರಾಟ ಮಾಡುವ ಬಗ್ಗೆ ನಿಜಲಿಂಗಪ್ಪ ಕುಟುಂಬದವರು ಒಪ್ಪಿಗೆ ನೀಡಿದ್ದರು. ಆದರೆ ಸರ್ಕಾರ ನಿರುತ್ಸಾಹ ತೋರಿದ್ದರಿಂದ ಮಾರಾಟ ವಿಳಂಬವಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆಯುವುದಕ್ಕೆ ಸುಮಾರು ಒಂದು ದಶಕದ ಮೊದಲು ನಿರ್ಮಿಸಲಾದ ಮನೆ ಇದು.
ನಿಜಲಿಂಗಪ್ಪ ನಿವಾಸವನ್ನು ಸರ್ಕಾರಕ್ಕೇ ಮಾರಾಟ ಆಗುವಂತೆ ಮಾಡುವಲ್ಲಿ ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಪ್ರಮುಖ ಪಾತ್ರ ವಹಿಸಿದ್ದರು. ಸರ್ಕಾರದ ನಿರುತ್ಸಾಹದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದರು ಅಂತಲೂ ತಿಳಿದುಬಂದಿದೆ. ಇನ್ನು ಸರ್ಕಾರ ಶೀಘ್ರ ಕಾರ್ಯಪ್ರವೃತ್ತವಾಗಿ ನಿಜಲಿಂಗಪ್ಪ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಿ ಅವರ ಪರಂಪರೆಯನ್ನು ಗೌರವಿಸಬೇಕೆಂದು ಕೊಂಡಜ್ಜಿ ಆಗ್ರಹಿಸಿದ್ದಾರೆ.
ಒಂದು ವರ್ಷದ ಹಿಂದೆ, ಮಾರಾಟ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ನಿಜಲಿಂಗಪ್ಪ ಅವರ ಮೊಮ್ಮಗ ವಿನಯ್ ಅಮೆರಿಕದಿಂದ ಆಗಮಿಸಿದ್ದರು. ಆದರೆ ಅಧಿಕಾರಿಗಳು ಅಡೆತಡೆಗಳನ್ನುಂಟುಮಾಡಿ ನೋಂದಣಿ ಆಗದಂತೆ ಮಾಡಿದ್ದರು. ವರ್ಷಗಳಿಂದ ಅಧಿಕಾರಿಗಳು ಈ ಪ್ರಕ್ರಿಯೆಗೆ ಅಡ್ಡಿಪಟಿಸಿದ್ದರು ಎಂದು ಕೊಂಡಜ್ಜಿ ಆರೋಪಿಸಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಇನ್ನು ಈ ನಿವಾಸವು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದ್ದು, ಕರ್ನಾಟಕದ ಅತ್ಯಂತ ಪ್ರಭಾವಿ ರಾಜಕೀಯ ವ್ಯಕ್ತಿಗಳ ಜೀವನಕ್ಕೆ ಸಾಕ್ಷಿಯಾಗಿದೆ. ಇನ್ನು ಮಾಜಿ ಸಿಎಂ ಎಸ್ ನಿಜಲಿಂಗಪ್ಪ ನಿವಾಸ ಚಿತ್ರದುರ್ಗ ನಗರದ ವಾರ್ಡ್ ನಂ. 32 ವಿಪಿ ಬಡಾವಣೆಯ ಡಿಸಿ ಬಂಗಲೆಯ ಹತ್ತಿರವಿದೆ. 117 X 130 ಅಡಿ ವಿಸ್ತೀರ್ಣದ ಶ್ವೇತ ವರ್ಣದ ಈ ಮನೆಯನ್ನು ಖರೀದಿಸಿ ವಸ್ತು ಸಂಗ್ರಹಾಲಯ ಹಾಗೂ ಸ್ಮಾರಕ ಮಾಡಲು ಸರ್ಕಾರ ತೀರ್ಮಾನ ಮಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿದೆ 4 ಸಭೆಗಳನ್ನೂ ಮಾಡಿತ್ತು. ನಂತರ ಉತ್ಸಾಹ ತೋರಿರಲಿಲ್ಲ.
ನಿಜಲಿಂಗಪ್ಪ ಅವರು ಮೊಮ್ಮಗ ವಿನಯ್ ಹೆಸರಿಗೆ ವಿಲ್ ಬರೆದಿದ್ದಾರೆ. ಆದ್ದರಿಂದ ಮನೆಯನ್ನು ಸಬ್ ರಿಜಿಸ್ಟಾರ್ ಮೂಲಕ ನೋಂದಣಿ ಮಾಡಲು ಸಾಧ್ಯ ಆಗುತ್ತಿಲ್ಲ ಎಂದು ಆಡಳತ ಹೇಳಿತ್ತು. ಆದರೆ ಅದಕ್ಕಾಗಿಯೇ ವಿನಯ್ ಅಮೆರಿಕದಿಂದ ಬಂದಿದ್ದರು. ಆಗಲೂ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿರಲಿಲ್ಲ. ಅಂತಿಮವಾಗಿ ಇದೀಗ ಮನೆ ಸರ್ಕಾರಕ್ಕೆ ಹಸ್ತಾಂತರವಾಗಿದೆ.












Click it and Unblock the Notifications