ಮೆಕ್ಕೆಜೋಳ ಬಿತ್ತನೆಯಲ್ಲಿ ಬ್ಯುಸಿಯಾದ ಮಾಜಿ ಸಚಿವ ಆಂಜನೇಯ
ಚಿತ್ರದುರ್ಗ, ಜುಲೈ 17: ಕೊರೊನಾ ಸೋಂಕು ದಿನೇ ದಿನೇ ತಲ್ಲಣವನ್ನು ಹೆಚ್ಚಾಗಿಸುತ್ತಿದೆ. ಉದ್ಯೋಗ ಕಳೆದುಕೊಂಡ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖ ಮಾಡಿದ್ದಾರೆ. ರಾಜಕಾರಣಿಗಳು ಸಹ ಈ ವೇಳೆ ಕೃಷಿ ಕಡೆ ಆಸಕ್ತಿ ತೋರುತ್ತಿದ್ದಾರೆ. ಲಾಕ್ ಡೌನ್ ಆಗಿರುವ ಈ ಸಮಯದಲ್ಲಿ ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
Recommended Video
ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು | Filmibeat Kannada
ಚಿತ್ರದುರ್ಗದಲ್ಲೂ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸದ್ಯಕ್ಕೆ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದುರ್ಗದಲ್ಲಿ ಕೆಲ ದಿನಗಳಿಂದ ಒಂದಿಷ್ಟು ಮಳೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.

ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಸೀಬಾರ ಸಮೀಪದಲ್ಲಿರುವ ತಮ್ಮ ಜಮೀನಿನಲ್ಲಿ ಆಂಜನೇಯ ಅವರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ತಮ್ಮ ಈ ಬಿಡುವಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.












Click it and Unblock the Notifications