ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ಸಾವು
ಚಿತ್ರದುರ್ಗ, ಜುಲೈ 17: ಲಾರಿ ಮತ್ತು ಇನೊವಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದ ಬಳಿ ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications