ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಚಿವ ಡಿ.ಮಂಜುನಾಥ್ ಅಂತ್ಯಕ್ರಿಯೆ

ಚಿತ್ರದುರ್ಗ, ಫೆಬ್ರವರಿ 04: ನಿನ್ನೆ ನಿಧನರಾದ ಮಾಜಿ ಸಚಿವ ಡಿ. ಮಂಜುನಾಥ್ (92) ಅವರ ಅಂತ್ಯಕ್ರಿಯೆಯು ಇಂದು ಹಿರಿಯೂರಿನ ಜವಗೊಂಡನಹಳ್ಳಿ ಹೋಬಳಿಯ ಗಾಯಿತ್ರಿಪುರದ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ರಾಜಕೀಯದಿಂದ ದೂರವುಳಿದಿದ್ದ ಅವರು ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ನಿನ್ನೆ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇಂದು 2 ಗಂಟೆಗೆ ಪಾರ್ಥೀವ ಶರೀರವನ್ನು ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಅವರ ತೋಟದಲ್ಲಿ ಸಂಜೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

Funeral Of Former Minister D.Manjunath Held With Government Honors In Chitradurga

1959ರಲ್ಲಿ ತಾಲೂಕು ಮಂಡಳಿ ಚುನಾವಣೆ ಮೂಲಕ ನಾಲ್ಕನೇ ಸಾರ್ವತ್ರಿಕ ಚುನಾವಣೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ 1967ರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. 2004 ರ ಧರ್ಮಸಿಂಗ್ ಸರ್ಕಾರಲ್ಲಿ ಶಿಕ್ಷಣ ಸಚಿವರಾಗಿದ್ದರು. ಡಿ.ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ. ಸಿದ್ದರಾಮಯ್ಯ, ಡಿಸಿಎಂ ಅಶ್ವಥ್ ನಾರಾಯಣ, ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್, ಮಾಜಿ ಸಚಿವ ಡಿ. ಸುಧಾಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ, ಮುರುಘಾ ಶ್ರೀಗಳು, ಮಾಜಿ ಸಚಿವ ಎನ್.ಎಂ.ನಬಿ ಸೇರಿದಂತೆ ಹಲವು ಗಣ್ಯರು ಮಂಜುನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+