ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ ..!
ಚಿತ್ರದುರ್ಗ, ಸೆಪ್ಟೆಂಬರ್ 24 : ಅಕ್ಟೋಬರ್ 8 ರಂದು ನಡೆಯಲಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಗೆ ಮುಂಬೈಯಿಂದ ಡಿಜೆ ಬರಲಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.
ದಾವಣಗೆರೆಯ ಕಾರ್ಯಮವೊಂದರಲ್ಲಿ ಮಾತನಾಡಿರುವ ಅವರು ಈ ಬಾರಿ ಚಿತ್ರದುರ್ಗದಲ್ಲಿ ನಡೆಯುಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಡಿಜೆ ಬರುತ್ತದೆ. 24 ಬಾಕ್ಸ್ ಗಳಿರುತ್ತವೆ. 12 ಸೌಂಡ್ ಗೆ, 12 ಬೇಸ್ ಗೆ ಇರುತ್ತದೆ. ನಾವೆಲ್ಲರೂ ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.

ಅಲ್ಲದೇ ಈ ಬೃಹತ್ ಶೋಭಾಯಾತ್ರೆಯಲ್ಲಿ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಆದರೆ ಇದು 10 ಲಕ್ಷ ಆಗಬೇಕು. ನೀವೆಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎಂದು ದಾವಣಗೆರೆ ಜನತೆಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಆಹ್ವಾನಿಸಿದ್ದಾರೆ.
ನಗರದ ಪಂಚಾಕ್ಷರಿ ಕಲ್ಯಾಣ ಮಂಟಪ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿ ಸುಮಾರು 14ಅಡಿ ಎತ್ತರ ಇದೆ. ಈಗಾಗಲೇ ಗಣಪತಿ ಪ್ರತಿಷ್ಠಾಪನೆ ಮುಂಭಾಗದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಲಕ್ಷಾಂತರ ಮಂದಿ ಭಕ್ತರು ಗಣಪನ ದರ್ಶನ ಪಡೆಯುತ್ತಿದ್ದಾರೆ. ಇತ್ತೀಚಿಗಷ್ಟೇ ನಟ ಅಭಿಷೇಕ್ ಅಂಬರೀಷ್ ಕೂಡ ಭೇಟಿ ಹಿಂದೂ ಮಹಾಗಣಪತಿ ದರ್ಶನ ಪಡೆದ್ದರು.
ಅಕ್ಟೋಬರ್ 8 ರಂದು ಬೆಳಿಗ್ಗೆ 11ಗಂಟೆಯ ಸುಮಾರಿಗೆ ವಿಜ್ಞಾನ ಕಾಲೇಜು ಮುಂಭಾಗದಿಂದ ಆರಂಭಗೊಂಡು ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಗೊಳ್ಳಲಿದೆ. ಈ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಬರಲಿದ್ದಾರೆ. ಪ್ರತಿಷ್ಠಾಪನ ಸ್ಥಳದಿಂದ ಗಣಪತಿ ಮೆರವಣಿಗೆ ಆರಂಭಗೊಂಡು, ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದದ ಮೂಲಕ ಶೋಭಾಯಾತ್ರೆ ಸಾಗಲಿದೆ. ಈ ಮೆರವಣಿಗೆಯಲ್ಲಿ ವಾದ್ಯ ಗೋಷ್ಠಿ, ತಮಟೆ, ಡೋಲು, ಗೊಂಬೆ ಕುಣಿತ, ವೀರಗಾಸೆ ಈಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಲಿವೆ.
ಕೇಸರಿಮಯವಾಗಲಿರುವ ಕೋಟೆನಾಡು
ಗಣೇಶನ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗ ನಗರ ಕೇಸರಿ ಬಣ್ಣದ ಮಾಯವಾಗಿರುತ್ತದೆ. ಎಲ್ಲಿ ಎತ್ತಾ ನೋಡಿ ಕಣ್ಣಾಡಿಸಿದರೂ ಕೇಸರಿ ಬಾವುಟ ಹಾರಾಟ ಕಾಣಲಿವೆ. ನಗರದ ವೃತ್ತಗಳಿಗೆ ಬಣ್ಣ, ಬಣ್ಣದ ಅಲಂಕಾರ ಮಾಡಲಾಗುತ್ತದೆ. ಪ್ರಮುಖವಾಗಿ ಮದಕರಿನಾಯಕ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ, ಕನಕ ಸರ್ಕಲ್ ಸೇರಿದಂತೆ ಮತ್ತಿತರರ ವೃತ್ತಗಳಿಗೆ ಅಲಂಕಾರ ಮಾಡಲಾಗುತ್ತದೆ.
ಹೊರ ಜಿಲ್ಲೆಗಳಿಂದ ಭಕ್ತರ ಆಗಮನ
ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ನಾನಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ.
ಒಟ್ಟಾರೆಯಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮ 21 ದಿನಗಳ ಕಾಲ ನಡೆಯುತ್ತಿದ್ದು, ಈ ಬೃಹತ್ ಶೋಭಾಯಾತ್ರೆ ಚಿತ್ರದುರ್ಗ ದೇಶದಲ್ಲೇ ಗಮನ ಸೆಳೆದಿದೆ ಎನ್ನಬಹುದು. ಈ ಅದ್ದೂರಿ ಗಣಪತಿ ಮೆರವಣಿಗೆ ಕೆಲವು ದಿನಗಳು ಬಾಕಿ ಇದ್ದು, ಮೆರವಣಿಗೆ ಕಣ್ತುಂಬಿಕೊಳ್ಳಲು ಗಣೇಶನ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications