ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗಕ್ಕೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್

|
Google Oneindia Kannada News

ಚಿತ್ರದುರ್ಗ, ನವೆಂಬರ್ 12: ಚಿತ್ರದುರ್ಗ ಜಿಲ್ಲೆಯ ಜನರಿಗೆ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಗಿಫ್ಟ್ ನೀಡಿದೆ. ಚಿತ್ರದುರ್ಗ ಜನತೆಯ ಬಹುದಿನಗಳ ಕನಸು ನನಸಾಗುವಂತೆ ಕಾಣುತ್ತಿದೆ.

ಈ ಹಿಂದೆ ತಡೆ ಹಿಡಿಯಲಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಹಣ ಬಿಡುಗಡೆ ಮಾಡಲು ನಿರ್ಧಾರ ಕೈಗೊಂಡಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಗುರುವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಮಾತುಕತೆ ನಡೆಸಿದ್ದಾರೆ.

"ನಳಿನ್ ಕುಮಾರ್ ಕಟೀಲ್ ಇನ್ನೂ ಅಪ್ರಬುದ್ಧ ರಾಜಕಾರಣಿ"

ಈ ಸಂದರ್ಭ ಉಭಯ ಜಿಲ್ಲೆಯ ಅಭಿವೃದ್ಧಿಗೆ ಹಣಕಾಸು ನೆರವು ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ವಿಚಾರವಾಗಿಯೂ ಚರ್ಚೆಯಾಗಿದ್ದು, ಕಾಲೇಜು ನಿರ್ಮಾಣ ಕಾರ್ಯಕ್ಕೆ 60 ಕೋಟಿ ರೂ. ಅನುದಾನ ಬಿಡುಗಡೆಗೆ ಸೂಚನೆ ನೀಡಲಾಯಿತು.

Government Agreed For Medical College In Chitradurga And Decided To Release Fund

60 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಸಂಸದ ಎ.ನಾರಾಯಣಸ್ವಾಮಿ, ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಇದ್ದರು.

English summary
The state government has given Deepavali gift to the people of Chitradurga district. The government has agreed for medical college in Chitradurga and has decided to release the funds
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X