ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂದಗತಿಯಲ್ಲಿ ಸಾಗುತ್ತಿರುವ ಗ್ರಾಮ ಪಂಚಾಯತಿ ಚುನಾವಣಾ ಫಲಿತಾಂಶ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 30: ಚಿತ್ರದುರ್ಗ ಜಿಲ್ಲೆಯ ಆರು ತಾಲೂಕು ಕೇಂದ್ರಗಳಲ್ಲಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಮತ ಎಣಿಕೆ ಕೇಂದ್ರಗಳ ಬಳಿ ಅಭ್ಯರ್ಥಿಗಳ ಬೆಂಬಲಿಗರು ಕಿಕ್ಕಿರಿದು ನೆರೆದಿರುವ ಪರಿಣಾಮ ಗುಂಪು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದರೂ, ಜನರು ಮಾತ್ರ ಯಾವುದಕ್ಕೂ ಕೇರ್ ಮಾಡುತ್ತಿಲ್ಲ.

ಲೋಕಲ್ ಫೈಟ್: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿಲೋಕಲ್ ಫೈಟ್: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿ

ಪಕ್ಷಾತೀತವಾಗಿ ನಡೆದಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸುಮಾರು 3,500 ಸ್ಥಾನಗಳಿಗೆ 8 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ, ಬ್ಯಾಲೆಟ್ ಪೇಪರ್ ವಿಂಗಡಿಸಿ ಮತ ಎಣಿಕೆ ಮಾಡುವುದು ತುಂಬಾ ವಿಳಂಬವಾಗುತ್ತಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳ ಫಲಿತಾಂಶ ಬರಲು ರಾತ್ರಿ 8 ಗಂಟೆ ಆಗಬಹುದು ಎಂದು ಅಂದಾಜಿಸಲಾಗಿದೆ.

Gram Panchayat Election Results 2020: Vote Counting In Slow Pace

ಒಂಬತ್ತು ಗಂಟೆಗೆ ಆರಂಭವಾಗಿರುವ ಮತ ಎಣಿಕೆಯಲ್ಲಿ ಆರಂಭಿಕವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹಿನ್ನಡೆಯುಂಟಾಗಿದೆ. ಪಕ್ಷೇತರ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೂರನೇ ಸ್ಥಾನಕ್ಕಾಗಿ ಪೈಪೋಟಿಗಿಳಿಯುವ ಸಾಧ್ಯತೆ ಹೆಚ್ಚಾಗಿದೆ.

Recommended Video

ಬೆಂಗಳೂರು: 'ಗ್ರಾ.ಪಂ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದೆ'-ಆರ್.ಆಶೋಕ್ | Oneindia Kannada

English summary
The Gram Panchayat general election vote counting in six taluka centers in Chitradurga district has gone slow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X