ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾ.ಪಂ ಚುನಾವಣೆ: ಚಿತ್ರದುರ್ಗದ ಮೂರು ತಾಲೂಕುಗಳಲ್ಲಿ ಭಾನುವಾರ ಎರಡನೇ ಹಂತದ ಮತದಾನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 26: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ಭಾನುವಾರ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣಾ ಮತದಾನ ನಡೆಯಲಿದೆ.

ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡು, ಅಧಿಕಾರಿಗಳು ಚುನಾವಣಾ ಸಾಮಾಗ್ರಿಗಳೊಂದಿಗೆ ಮತಗಟ್ಟೆಗೆ ತೆರಳಿದ್ದಾರೆ. ಭಾನುವಾರ ಬೆಳಿಗ್ಗೆ ಏಳು ಗಂಟೆಗೆಯಿಂದ ಸಂಜೆ ಐದು ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ.

ಗ್ರಾಮ ಪಂಚಾಯತಿ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ 2 ಹಂತದ ಮತದಾನಗ್ರಾಮ ಪಂಚಾಯತಿ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ 2 ಹಂತದ ಮತದಾನ

ಹಿರಿಯೂರು ತಾಲ್ಲೂಕಿನಲ್ಲಿ ಒಟ್ಟು 33 ಗ್ರಾಮ ಪಂಚಾಯಿತಿಗಳಿದ್ದು, 590 ಸ್ಥಾನಗಳ ಪೈಕಿ, ಇದರಲ್ಲಿ 90 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. 499 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1382 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1208 ಚುನಾವಣಾ ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 300 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Gram Panchayat Election: Second Phase Of Polling On Sunday In Three Talukas Of Chitradurga

ಚಳ್ಳಕೆರೆ ತಾಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗದ್ದು, 755 ಒಟ್ಟುಸ್ಥಾನಗಳಿವೆ. ಇದರಲ್ಲಿ 68 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. 675 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 7156 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 361 ಮತಗಟ್ಟೆ ಸ್ಥಾಪಿಸಲಾಗಿದೆ.

ಮೊಳಕಾಲ್ಮೂರು ತಾಲೂಕಿನಲ್ಲಿ ಒಟ್ಟು 16 ಗ್ರಾಮ ಪಂಚಾಯಿತಿಗಳಿದ್ದು, 323 ಒಟ್ಟು ಸದಸ್ಯ ಸ್ಥಾನಗಳಿವೆ. ಇದರಲ್ಲಿ 31 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1 ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. 291 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 689 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 162 ಮಾತುಗಳನ್ನು ಸ್ಥಾಪಿಸಿದ್ದಾರೆ.

ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ!ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ!

ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಚುನಾವಣೆ ನಡೆಸಲು ಕ್ರಮಕೈಗೊಳ್ಳಲಾಗಿದೆ. ಸ್ಯಾನಿಟೈಸರ್, ಮಾಸ್ಕ್ ಇತರೆ ಸಾಮಾಗ್ರಿಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಈಗಾಗಲೇ ಚುನಾವಣಾ ಅಧಿಕಾರಿಗಳು ಮತಗಟ್ಟೆ ಬಳಿ ತೆರಳಿದ್ದು, ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Recommended Video

Chinaದಿಂದ 50 Droneಗಳನ್ನು ಖರೀದಿಸಿದ Pakistanನ | Oneindia Kannada

English summary
The second phase of Grama Panchayat elections will be held on Sunday in Hiriyuru, Challakere and Molakalmooru taluks in Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X