ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮ ಪಂಚಾಯತಿ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ 2 ಹಂತದ ಮತದಾನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್ 30: ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ.

ಮೊದಲ ಹಂತದ ಮತದಾನ ಡಿ.22 ರಂದು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ನಡೆಯಲಿದ್ದು, ಎರಡನೇ ಹಂತದ ಮತದಾನ ಡಿ.27 ರಂದು ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ

ಮತ ಎಣಿಕೆಯು ಒಂದೇ ದಿನ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಡಿ.30 ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.7 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಡಿ.11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.12 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಾಸ್ ಪಡೆಯಲು ಡಿ.14 ಕೊನೆಯ ದಿನವಾಗಿದೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.24 ರಂದು ಅವಕಾಶ ಕಲ್ಪಿಸಲಾಗುವುದು.

Gram Panchayat Elections: 2-Phase Polling In Chitradurga District

ಎರಡನೇ ಹಂತದ ಮತದಾನಕ್ಕೆ ಡಿ.11 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಡಿ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಾಸ್ ಪಡೆಯಲು 19 ರಂದು ಕೊನೆಯ ದಿನವಾಗಿದೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.29ರಂದು ಅವಕಾಶ ಕಲ್ಪಿಸಲಾಗುವುದು.

ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳಿಂದ ಒಟ್ಟು 189 ಗ್ರಾಮ ಪಂಚಾಯಿತಿಗಳಿವೆ. ಮೊದಲ ಹಂತದ ಮತದಾನವು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 38 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 727 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Gram Panchayat Elections: 2-Phase Polling In Chitradurga District

ಹೊಸದುರ್ಗ ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 493 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 29 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 533 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಮತದಾನವು ಹಿರಿಯೂರು, ಮೊಳಕಾಲ್ಮುರು ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ. ಹಿರಿಯೂರು ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 590 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 323 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 755 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

English summary
The state election commission has announced the election for the Gram Panchayats of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X