ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತ ಜನ ಕಾಂಗ್ರೆಸ್ ಪರ ಒಲವು - ಮಾಜಿ ಸಚಿವ ಎಚ್.ಆಂಜನೇಯ
ಚಿತ್ರದುರ್ಗ, ಏಪ್ರಿಲ್ 6 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಬ್ರಹ್ಮಾಂಡ ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಿಂದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮತದಾನದ ದಿನಗಣನೆಗೆ ಕಾತುರದಿಂದ ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಹೊಳಲ್ಕೆರೆ ಕ್ಷೇತ್ರಕ್ಕೆ ಎಚ್.ಆಂಜನೇಯ ಹೆಸರು ಘೋಷಣೆ ಆಗುತ್ತಿದ್ದಂತೆ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಕ್ಷದ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಮಾಜಿ ಸಚಿವ ಎಚ್.ಆಂಜನೇಯ ಸುದ್ದಿಗೋಷ್ಠಿ ನಡೆಸಿದ್ದಾರೆ.

ಹೊಳಲ್ಕೆರೆ ಕ್ಷೇತ್ರದಲ್ಲಿ ಚಂದ್ರಪ್ಪ ಅವರ ದುರ್ವತನೆ, ಅಹಂಕಾರಕ್ಕೆ, ಗುತ್ತಿಗೆದಾರರು, ಅಧಿಕಾರಿಗಳು, ಸಾಮಾನ್ಯ ಜನರು ಬೇಸತ್ತಿದ್ದಾರೆ. ಇಪ್ಪತ್ತು ದಿನಗಳಿಂದ ಕ್ಷೇತ್ರದಲ್ಲಿ ಮನೆ ಮನೆಗೆ ಹೋಗಿ ಭೇಟಿ ನೀಡಿದ್ದ ಸಂದರ್ಭ, ಜನರೇ ಶಾಸಕರ ದುರ್ವತನೆ ಹೇಳಿಕೊಳ್ಳುತ್ತಿದ್ದು, ಚುನಾವಣೆಗೆ ನಿಲ್ಲುವಂತೆ ನನ್ನ ಮೇಲೆ ಒತ್ತಡ ತರುತ್ತಿದ್ದರು ಎಂದರು.
ಈ ಮಧ್ಯೆ ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆ ಆಗಿರಲಿಲ್ಲ. ಇದಕ್ಕೆ ಕಾರಣ ಏನೆಂಬುದು ನನಗೂ ಮತ್ತು ಹೈಕಮಾಂಡ್ ಮಾತ್ರವೇ ಗೊತ್ತಿದೆ. ಅದನ್ನು ಹೇಳಲು ಸಾಧ್ಯವಿಲ್ಲ. ಐವತ್ತು ವರ್ಷದ ನನ್ನ ಪಕ್ಷ ನಿಷ್ಠೆ, ಸಂಘಟನೆ, ಬದ್ಧತೆ ಗುರುತಿಸಿ ಪಕ್ಷ ಅನೇಕ ಸ್ಥಾನಮಾನ ನೀಡಿದೆ. ನಿರೀಕ್ಷೆ ಇಲ್ಲದಿದ್ದ ಸಂದರ್ಭದಲ್ಲಿ ಬಹುದೊಡ್ಡ ಸಮಾಜ ಕಲ್ಯಾಣ ಖಾತೆ ಸಚಿವನಾಗಿ ಐದು ವರ್ಷ ಆಡಳಿತ ನಡೆಸಿ, ಅನೇಕ ಜನಪರ ಯೋಜನೆ ಜಾರಿಗೆ ಅನುವು ಮಾಡಿಕೊಟ್ಟಿದೆ. ಈಗಲೂ ಟಿಕೆಟ್ ನೀಡುವ ಮೂಲಕ ಶಿಸ್ತಿನ ಸಿಪಾಯಿಗಳನ್ನು ಗೌರವದಿಂದ ಪಕ್ಷ ನಡೆಸಿಕೊಳ್ಳುತ್ತದೆ ಎಂಬ ಸಂದೇಶ ನೀಡಿದೆ ಎಂದರು.
ಟಿಕೆಟ್‌ಗಾಗಿ ದೆಹಲಿ, ಬೆಂಗಳೂರಲ್ಲಿ ಬೀಡುಬಿಟ್ಟು ಯಾವುದೇ ಲಾಭಿ ಮಾಡದೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗಾಗಿ ಸುತ್ತಾಟ ನಡೆಸುತ್ತಿದ್ದ ನನ್ನ ಪಕ್ಷ ನಿಷ್ಠೆ, ತಾಳ್ಮೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲುವಿಗೆ ಶ್ರಮಿಸುತ್ತೇನೆ ಎಂಬ ನನ್ನ ಸಂದೇಶ ಹಾಗೂ ಕ್ಷೇತ್ರದಲ್ಲಿ ಎಐಸಿಸಿ, ಕೆಪಿಸಿಸಿ ನಡೆಸಿದ ಸರ್ವೇ ವರದಿ ಆಧಾರದಲ್ಲಿ ಪಕ್ಷ ನನಗೆ ಟಿಕೆಟ್ ನೀಡಿದೆ ಎಂದು ಹೇಳಿದರು.

ಬಹಳ ಜನ ಟಿಕೆಟ್ ಆಕಾಂಕ್ಷಿಗಳು ಇದ್ದರು. ಅವರೆಲ್ಲರಿಗೂ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ ದಿನವೇ ಶುಭಾಷಯ ಕೋರಿದ್ದೆ. ನೀವು ಕೂಡ ಪ್ರಭುತ್ವಕ್ಕೆ ಬರಬೇಕು ಎಂದು ತಿಳಿಸಿದ್ದೆ. ಆದರೆ, ಪಕ್ಷ ಕ್ಷೇತ್ರದಲ್ಲಿ ಕೊನೆ ಗಳಿಗೆಯಲ್ಲಿ ನಡೆಸಿದ ಸರ್ವೇ ಆಧಾರದಡಿ ನನಗೆ ಟಿಕೆಟ್ ನೀಡಿದೆ ಎಂದರು.
ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದೆ. ಇದೇ ಕಾರಣಕ್ಕೆ ಟಿಕೆಟ್‌ಗಾಗಿ ಅರ್ಜಿ ಆಹ್ವಾನಿಸುತ್ತಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನೂ ಟಿಕೆಟ್‌ಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ನನಗೆ ಟಿಕೆಟ್ ನೀಡಲೇಬೇಕೆಂದು ಒತ್ತಾಯ ಮಾಡಬಹುದು. ಪಕ್ಷ ಅದನ್ನು ತಾಳ್ಮೆಯಿಂದ ಕೇಳಿಸಿಕೊಂಡು, ಗೆಲ್ಲುವ ಹಾಗೂ ಪಕ್ಷ ನಿಷ್ಠೆ ಎರಡನ್ನು ಗಮನಿಸಿ ತೀರ್ಮಾನ ಕೈಗೊಳ್ಳುತ್ತದೆ. ಅದನ್ನು ನಾನು ಸೇರಿದಂತೆ ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದು ಹೇಳಿದರು.
ಒಂದೊಮ್ಮೆ ಬೇರೆ ಯಾರಿಗಾದರೂ ಪಕ್ಷ ಟಿಕೆಟ್ ನೀಡಿದ್ದರೆ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಲು ಸಿದ್ಧನಿದ್ದೇನೆ. ಇದೇ ಕಾರಣಕ್ಕೆ ನನಗೆ ಮೊದಲ ಪಟ್ಟಿಯಲ್ಲಿ ಹೆಸರು ಘೋಷಣೆ ಆಗದಿದ್ದರೂ, ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬೆಂಬಲಿಗರು ವರಿಷ್ಠರ ಮೇಲೆ ಒತ್ತಡ ತರಲು ಮುಂದಾದಾಗ ಸುಮ್ಮನಿರಿಸಿದೆ. ಯಾರಿಗೆ ಪಕ್ಷ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಸಿದ್ಧರಿರಬೇಕು ಎಂದು ಹೇಳಿದ್ದೆ. ನಾನು ಕೂಡ ದೆಹಲಿ, ಬೆಂಗಳೂರಿಗೆ ಹೋಗದೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಭಾರತೀಯ ಪಕ್ಷದ ದುರಾಡಳಿತ, ಭ್ರಷ್ಟಾಚಾರದಿಂದ ಜನತೆ ತೀವ್ರ ಮನನೊಂದಿದ್ದಾರೆ. ಪಕ್ಷಕ್ಕೆ ಬಹುಮತ ನೀಡದಿದ್ದರೂ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದ ಪಕ್ಷದ ಕುರಿತು ಅಸಮಾಧಾನ ಇದೆ. ಆದ್ದರಿಂದ ಈ ಬಾರಿ ನಿರೀಕ್ಷೆ ಮೀರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿದ್ಧರಾಗಿದ್ದಾರೆ. ಇನ್ನೂ ಹೊಳಲ್ಕೆರೆ ಕ್ಷೇತ್ರದಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಚಂದ್ರಪ್ಪನ ಭ್ರಷ್ಟಾಚಾರ, ದುರಾಹಂಕಾರಕ್ಕೆ ಮನನೊಂದಿದ್ದು, ಆತನನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications