ಅಶ್ಲೀಲ ವಿಡಿಯೋ ಪೇನ್ ಡ್ರೈವ್ ಹಂಚಿದ ಜಿ.ದೇವರಾಜೇಗೌಡ ಬಂಧನ

ಚಿತ್ರದುರ್ಗ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ವಕೀಲ ದೇವರಾಜೆಗೌಡ ಮೇಲೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಹೊಳೆನರಸೀಪುರ ಪೋಲಿಸರು ಹಿರಿಯೂರು ತಾಲೂಕಿನ ಗೂಯಿಲಾಳು ಟೋಲ್ ಬಳಿ ಆರೋಪಿ ಇರುವ ಖಚಿತ ಮಾಹಿತಿ ಪಡೆದು ಶುಕ್ರವಾರ ಬಂಧಿಸಿದ್ದಾರೆ.

Hassan BJP Leader Advocate Devarajegowda Arrested in Sexual Harassment Case

ಹಿರಿಯೂರು ಗ್ರಾಮಾಂತರ ಸಿಪಿಐ ಕಾಳಿಕೃಷ್ಣ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದೆ.

ಬಿಜೆಪಿ ಮುಖಂಡರು ಆಗಿರುವ ದೇವರಾಜೇಗೌಡ ಇವರು ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮಾಹಿತಿ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ, ಪ್ರಜ್ವಲ್ ರೇವಣ್ಣ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಬಿಜೆಪಿ-ಜೆಡಿಎಸ್ ಮೈತ್ರಿಗೂ ಮೊದಲು (2023 ರಲ್ಲಿ) ಬಿಜೆಪಿಗೆ ಪತ್ರ ಬರೆದಿದ್ದರು.

ಲೈಂಗಿಕ ದೌರ್ಜನ್ಯ, ಕರೆ ಮಾಡಿ ಮಾನಸಿಕ ಹಿಂಸೆ ಆರೋಪ

ಸದರಿ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕಟ್ ಕೊಡದಂತೆ ಹೇಳಿದ್ದರು. ಇದೀಗ ಇವರ ವಿರುದ್ಧ ಹಾಸನ ಮೂಲದ 36 ವರ್ಷದ ಮಹಿಳೆ ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ಲೈಂಗಿಕ ಕಿರುಕುಳ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ. ಆಗಾಗ ವಿಡಿಯೋ ಕರೆ ಮಾಡಿ ಅಂಗಾಂಗ ತೋರಿಸುವಂತೆ ಪೀಡಿಸಿ ಮಾನಸಿಕ ಕಿರುಕುಳ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಮಹಿಳೆಯ ಈ ದೂರು ಆಧರಿಸಿ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದೇವರಾಜೇಗೌಡ ಮೇಲೆ FIR ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಅವರು ತಲೆಮರೆಸಿಕೊಂಡಿದ್ದು, ಹಿರಿಯೂರಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+