ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಮುಖ್ಯಶಿಕ್ಷಕ

ಚಿತ್ರದುರ್ಗ, ಅಕ್ಟೋಬರ್‌, 25: ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸಿಲ್ಲ ಎಂದು ಕೋಪಗೊಂಡ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆಸಿಡ್ ಎರಚಿರುವ ಬೆಚ್ಚಿಬೀಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಜೋಡಿಚಿಕ್ಕೇನಹಳ್ಳಿಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತಹಗತಿಯ ಬಾಲಕಿಯೋರ್ವಳಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕ ರಂಗಸ್ವಾಮಿ ಎಂಬುವರು ಸೂಚಿಸಿದ್ದರು ಎನ್ನಲಾಗಿದೆ. ವಿದ್ಯಾರ್ಥಿನಿಯ ಸರಿಯಾಗಿ ಶೌಚಾಲಯ ಸ್ವಚ್ಛಗೊಳಿಸದ ಕಾರಣ ಕೋಪಗೊಂಡ ಮುಖ್ಯಶಿಕ್ಷಕ ರಂಗಸ್ವಾಮಿ ಎನ್ನುವವರು ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ತಂದಿದ್ದ ಆಸಿಡ್ ಅನ್ನೇ ವಿದ್ಯಾರ್ಥಿನಿಯ ಮೇರೆ ಎರಚಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Head master hurled acid on student at chitradurga district

ಶೌಚಾಲಯ ಕ್ಲೀನ್ ಮಾಡುವುದಕ್ಕೆ ಬಳಸುವ ಆಯಸಿಡ್ ಅನ್ನು ಎರಚಿದ ಪರಿಣಾಮ, ವಿದ್ಯಾರ್ಥಿನಿಯ ಬೆನ್ನಿಗೆ ಗಂಭೀರವಾಗಿ ಗಾಯವಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ

ಇತ್ತೀಚೆಗಷ್ಟೇ ಪ್ರತ್ಯೇಕ ಅತ್ಯಾಚಾರ ಪ್ರಕರಣಗಳಲ್ಲಿ ಚಾಮರಾಜನಗರ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ವಿಧಿಸಿತ್ತು. ಇನ್ನು ಪ್ರಕರಣಗಳಲ್ಲಿ ಸಂತ್ರಸ್ತರಾದ ಅಪ್ರಾಪ್ತ ಬಾಲಕಿಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಹಣವನ್ನು 30 ದಿನದ ಒಳಗೆ ಕೊಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾ.ಎ.ಸಿ.ನಿಶಾರಾಣಿ ಆದೇಶ ನೀಡಿದ್ದರು.

ಪ್ರಕರಣ-1

5 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರ ಬಸವರಾಜು (35) ಶಿಕ್ಷೆಗೊಳಗಾದ ಅಪರಾಧಿ. ಈತ 2019ರ ಡಿಸೆಂಬರ್‌ 2ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.‌ ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಸವರಾಜನಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿಲಾಗಿತ್ತು.

ಪ್ರಕರಣ-2

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಚಾಮರಾಜನಗರ ತಾಲೂಕಿನ ಗ್ರಾಮವೊಂದರ ನಾಗೇಶ್(23) ಶಿಕ್ಷೆಗೆ ಗುರಿಯಾದ ವ್ಯಕ್ತಿ. 2021ರ ಸೆಪ್ಟಂಬರ್ 13ರಂದು 12ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.‌ ಈತನ ವಿರುದ್ಧದ ಆರೋಪ ಸಾಕ್ಷಾಧಾರಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ ಈತನಿಗೆ 20 ವರ್ಷ ಕಠಿಣ ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿತ್ತು. ಈ ಎರಡು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+