ಭಾರೀ ಮಳೆ: ಜುಲೈ 26 & 27ರಂದು ಚಿತ್ರದುರ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಚಿತ್ರದುರ್ಗ, ಜುಲೈ, 26: ಭಾರೀ ಮಳೆ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶಾಲಾ-ಕಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಇದೀಗ ಮಧ್ಯ ಕರ್ನಾಟಕದಲ್ಲಿ ಮಳೆ ಚುರುಕು ಪಡೆದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಅಂಗನವಾಡಿಗಳಿಗೆ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಬಿಟ್ಟುಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ಹಿತ ದೃಷ್ಟಿಯಿಂದ ಜುಲೈ 26 ಮತ್ತು 27 ರಂದು ಎರಡು ದಿನಗಳ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Heavy rain: Holiday announced for Chitradurga districts schools and colleges on July 26 & 27

ಅದೇ ರೀತಿ ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ನಿರಂತರವಾಗಿ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ನದಿಗಳು ಅಪಾಯ ಮಟ್ಟ ಮೀರಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ಅದರಲ್ಲಿಯೂ ಅಘನಾಶಿನಿ ನದಿಯ ನೆರೆಗೆ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+