ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಟೆ ನಾಡು ಚಿತ್ರದುರ್ಗದಲ್ಲಿ ವರುಣನ ಆರ್ಭಟ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ. ಜೂನ್ 03: ಹಲವು ವರ್ಷಗಳಿಂದ ತೀವ್ರ ಬರಕ್ಕೆ ತುತ್ತಾಗಿದ್ದ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಮಳೆರಾಯ ಭರ್ಜರಿ ಎಂಟ್ರಿ ಕೊಟ್ಟಿದ್ದಾನೆ. ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕು ಸೇರಿದಂತೆ ಹಲವೆಡೆ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿದ್ದು, ಸತತ ಬರಗಾಲಕ್ಕೆ ಕಂಗೆಟ್ಟಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ

ಮಳೆಯ ಆರ್ಭಟ: ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟು ಹಾನಿ?ಮಳೆಯ ಆರ್ಭಟ: ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟು ಹಾನಿ?

ಈ ಬಾರಿ ಉತ್ತಮ‌ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಉತ್ಸಾಹದಿಂದ ಆರಂಭವಾಗುತ್ತಿವೆ, ಈ ನಡುವೆ ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಹಲವೆಡೆ ಅವಾಂತರವೂ ಸೃಷ್ಟಿಯಾಗಿದೆ, ಜಿಲ್ಲೆಯಾದ್ಯಂತ ಬಿರುಗಾಳಿ ಬೀಸುತ್ತಿದ್ದು, ಸಿಡಿಲಿನ ಅಬ್ಬರಕ್ಕೆ ಹಿರಿಯೂರಿನಲ್ಲಿ ತೆಂಗಿನ ಮರ ಹೊತ್ತಿ ಉರಿದಿದೆ. ತಾಲ್ಲೂಕಿನ ಜೆಜಿ ಹಳ್ಳಿ ಹೋಬಳಿಯ ಸೂರಪ್ಪನಹಟ್ಟಿ ಗ್ರಾಮದ ಮೇಣಪ್ಪನವರಿಗೆ ಸೇರಿದ ಕುರಿಗಳು ಹೊಲದಲ್ಲಿ ಬೀಡುಬಿಟ್ಟಿದ್ದರಿಂದ ಸಿಡಿಲು ಬಡಿದು 30 ಕುರಿಗಳು ಸಾವನ್ನಪಿವೆ. ಓಣಿಹಟ್ಟಿ ಸರ್ಕಾರಿ ಶಾಲಾ ಕಟ್ಟಡ ಮೇಲೆ ಮರ‌ ಬಿದ್ದ ಪರಿಣಾಮ ಕಟ್ಟಡಕ್ಕೆ ಹಾನಿಯಾಗಿದೆ. ಮಾಯಸಂದ್ರ ಗೊಲ್ಲರಹಟ್ಟಿಯಲ್ಲಿ ಮರ ಉರುಳಿದ ಪರಿಣಾಮ ಆಟೋವೊಂದು ಜಖಂಗೊಂಡಿದೆ.

 heavy rain in chitradurga district

ಹಲವು ಕಡೆ ಮನೆಯ ಶೀಟುಗಳು ಹಾರಿಹೋಗಿವೆ, ಇನ್ನೂ ಕೆಲವೆಡೆ ಮನೆಯ ಚಾವಣಿ ಕುಸಿದಿದ್ದು, ಗಾಳಿಯ ರಭಸಕ್ಕೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ, ಕಾಟನಾಯಕನಹಳ್ಳಿ, ಓಣಿಹಟ್ಟಿ, ಎಂ.ಡಿ. ಕೋಟೆ, ಮಸ್ಕಲ್, ಈಶ್ವರಗೆರೆ, ಧರ್ಮಪುರ ಸೇರಿದಂತೆ ಮತ್ತಿತರ ಭಾಗಗಳಲ್ಲಿ ರೈತರು ಬೆಳೆದಿದ್ದ ಅಡಿಕೆ, ಬಾಳೆ ತೋಟ ನೆಲ ಕಚ್ಚಿದೆ. ಅಲ್ಲಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಒಟ್ಟಾರೆ ಈ ಬಾರಿ ತಡವಾಗಿಯಾದರೂ ಎಂಟ್ರಿ ಕೊಟ್ಟಿರುವ ಮುಂಗಾರು, ರೈತರ ಮೊಗದಲ್ಲಿ ನಿರೀಕ್ಷೆ ಹುಟ್ಟಿಸಿದ್ದು ಮಾತ್ರವಲ್ಲದೇ ಅವಾಂತರವನ್ನೂ ಸೃಷ್ಟಿಸಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

 heavy rain in chitradurga district

ಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರುಕೊಡಗಿನಲ್ಲಿ ಆತಂಕದ ನಡುವೆಯೇ ಗದ್ದೆಗಿಳಿದ್ದಾರೆ ರೈತರು

ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್, ಮಳೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ ಮಳೆಯ ಅವಾಂತರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಮಾಹಿತಿ ಪಡೆದಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಹಾಗೂ ಹಾನಿಯಾದ ಪ್ರದೇಶಗಳಿಗೆ ಮತ್ತು ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.

English summary
chitradurga faced a severe water scarcity in recent years. now Heavy rains have been over the past two days, including Hiriyur and Chalakere Taluk in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X