5ನೇ ಬಾರಿಗೆ ಚುನಾವಣಾ ಅಖಾಡಕ್ಕಿಳಿದ ಹಿರಿಯೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ವ್ಯಕ್ತಿ ಪರಿಚಯ
ಚಿತ್ರದುರ್ಗ, ಏಪ್ರಿಲ್, 30: ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ 4ನೇ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಟ್ಟಾ ಶಿಷ್ಯರಲ್ಲಿ ಒಬ್ಬರಾಗಿದ್ದಾರೆ. ಹಾಗಾದರೆ ಮಾಜಿ ಸಚಿವ ಡಿ.ಸುಧಾಕರ್ ರಾಜಕೀಯದ ಹಾದಿಯ ಬಗ್ಗೆ ವಿವರವನ್ನು ಇಲ್ಲಿ ತಿಳಿಯಿರಿ.
ಅಲ್ಲದೆ ಡಿ.ಸುಧಾಕರ್ ಅವರು ಹಿರಿಯೂರು ಕ್ಷೇತ್ರದಲ್ಲಿ ಅಭಿವೃದ್ಧಿಯ ಹರಿಕಾರರು ಎಂದರೇ ತಪ್ಪಾಗಲಾರದು. ಯಾಕಂದರೆ ಬಡವರ ಕೊಡುಗೈ ದಾನಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿಯ ವ್ಯಕ್ತಿ ಪರಿಚಯ ತಿಳಿಯೋಣ ಬನ್ನಿ. ದಿವಂಗತ ಎನ್. ದಯಶರಥಯ್ಯ ಮಗನಾಗಿ, 28/03/1961ರಲ್ಲಿ ಡಿ ಸುಧಾಕರ್ ಚಳ್ಳಕೆರೆಯಲ್ಲಿ ಜನಿಸಿದರು. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಜನಿಸಿರುವ ಇವರು, ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಬಿಕಾಂ ಪದವಿ ಶಿಕ್ಷಣವನ್ನು ನ್ಯಾಷನಲ್ ಕಾಲೇಜು, ಶಿವಮೊಗ್ಗದಲ್ಲಿ ಮುಗಿಸಿದ್ದಾರೆ.

ಪದವಿ ಶಿಕ್ಷಣ ಮುಗಿಸಿದ ಬಳಿಕ ಬ್ಯುಸಿನೆಸ್ ಕಡೆ ಗಮನಹರಿಸಿದ್ದರು. ನಂತರ ಶ್ರೀಮತಿ ಹರ್ಷಿಣಿ ಎಂಬುವರೊಂದಿಗೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರಿಗೆ ಒಂದು ಗಂಡು ಮತ್ತು ಒಬ್ಬ ಹೆಣ್ಣು ಮಗಳಿದ್ದಾರೆ. ಇನ್ನು ಇವರ ಚಿಕ್ಕಪ್ಪರಾದ ಎನ್. ಜಯಣ್ಣ ಅವರು ಚಳ್ಳಕೆರೆ ಕ್ಷೇತ್ರದಲ್ಲಿ 1978 ಹಾಗೂ 1989ರಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಚಿಕ್ಕಪ್ಪನ ರಾಜಕೀಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಡಿ.ಸುಧಾಕರ್ ರಾಜಕೀಯ ದಾರಿಯನ್ನು ತಿಳಿದುಕೊಂಡು.
ಡಿ.ಸುಧಾಕರ್ ಅವರು 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 47,550 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದರು. ನಂತರ ಚಳ್ಳಕೆರೆ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾದ್ದರಿಂದ 2008ರಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ದಿಡೀರ್ ಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 43,078 ಮತಗಳನ್ನು ಪಡೆದು 16,158 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದರು.
ಈ ಮೂಲಕ ಅವರು ಬಿಜೆಪಿ ಸರ್ಕಾರದಲ್ಲಿ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದರು. ಬದಲಾದ ಸಮಯದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆದರು. ಇನ್ನು 2013ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆಗ ಇವರಿಗೆ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ನಡೆದವು. ಆದರೆ ಅದು ಸಾಧ್ಯವಾಗಲಿಲ್ಲ.
2013ರಲ್ಲಿ ಡಿ.ಸುಧಾಕರ್ ಅವರಿಗೆ ಕಾಂಗ್ರೆಸ್ ಪಕ್ಷ ಬಿ ಫಾರಂ ನೀಡಿತ್ತು. ಜೆಡಿಎಸ್ ಅಭ್ಯರ್ಥಿ ದಿವಂಗತ ಎ.ಕೃಷ್ಣಪ್ಪ ವಿರುದ್ಧ ಕೂದಲೆಳೆ ಅಂತರದಲ್ಲಿ ಅಂದರೆ 1,205 ಮತಗಳನ್ನು ಪಡೆದು, ಮರು ಆಯ್ಕೆ ಆದರು. (71661ಒಟ್ಟು ಮತಗಳು) ಇದರ ಜೊತೆಗೆ ಚಿತ್ರದುರ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸಹ ಆಯ್ಕೆಯಾದರು.
ನಂತರ 2018ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಆದರೆ ಈ ಚುನಾವಣೆಯಲ್ಲಿ 64,858 ಮತಗಳನ್ನು ಪಡೆದು, ಮತದಾರರ ತೀರ್ಪಿಗೆ ಸುಧಾಕರ್ ತಲೆ ಭಾಗಿಸಿದರು. ಯಾಕಂದರೆ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸುಮಾರು 12 ಸಾವಿರ ಮತಗಳಿಂದ ಪರಾಭವಗೊಂಡರು.
ಕಳೆದ ಚುನಾವಣೆಯಲ್ಲಿ ಸೋತೆ ಎಂದು ಸೋಲಿಗೆ ಧೃತಿಗೆಡದೆ ಕ್ಷೇತ್ರದ ಜನರ ಜೊತೆ ಪ್ರೀತಿ, ವಿಶ್ವಾಸ, ಒಡನಾಟ ಇಟ್ಟುಕೊಂಡಿದ್ದು, ಇದೀಗ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ಹತ್ತು ವರ್ಷಗಳಲ್ಲಿ ಅಭಿವೃದ್ಧಿ
2008 ಮತ್ತು 2013ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಪಡಿಸಿದ್ದಾರೆ. ದೇವರ ಕೊಟ್ಟ ಬಳಿ ಮುರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ರೈತರಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ ವೆಲ್ ಕೊರೆಸುವಿಕೆ, ಸಮುದಾಯ ಭವನ ನಿರ್ಮಾಣ ಮಾಡಿದ್ದಾರೆ.
ಹಿರಿಯೂರು ಕ್ಷೇತ್ರದಲ್ಲಿ ಒಮ್ಮೆ ಬರಗಾಲ ಆವರಿಸಿದ್ದ ಸಂದರ್ಭದಲ್ಲಿ ದನಕರುಗಳಿಗೆ ಮೇವಿನ ಕೊರತೆ ಉಂಟಾದಾಗ ತಾಲೂಕಿನ ಉಡುವಳ್ಳಿ ಕೆರೆಯಲ್ಲಿ ಮೇವು ಬೆಳೆದು ಹಂಚುವ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಬಡ ಮಕ್ಕಳಿಗೆ ಉಚಿತ ಶಿಕ್ಷಣ, ದಾನಧರ್ಮ ಮಾಡುವ ಮೂಲಕ ನೊಂದವರ ಬಾಳಿಗೆ ಬೆಳಕಾಗಿದ್ದಾರೆ ಎಂದು ಇಲ್ಲಿನ ಜನರಿಂದ ಬರುವ ಮಾತಾಗಿದೆ.
ಹೀಗೆ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಸುಧಾಕರ್ ಅವರಿಗೆ ತನ್ನ ಸಮುದಾಯದ ಮತಗಳೇ ಇಲ್ಲ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿರುವ ಸುಧಾಕರ್‌ಗೆ ರಾಜಕೀಯ ಪಯಣ ಸುಲಭವಾಗಿದೆ. ಇನ್ನು ಹಿರಿಯೂರು ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.
ಸುಧಾಕರ್ ಅವರು ಒಟ್ಟು 4 ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದು, ಒಮ್ಮೆ ಚಳ್ಳಕೆರೆ, ಎರಡು ಬಾರಿ ಹಿರಿಯೂರು ಕ್ಷೇತ್ರ ಸೇರಿ ಹ್ಯಾಟ್ರಿಕ್ ಗೆಲುವು ಪಡೆದು, 4ನೇ ಬಾರಿಗೆ ಸೋಲು ಕಂಡಿದ್ದರು. ಇದೀಗ 5ನೇ ಬಾರಿಗೆ ಚುನಾವಣಾ ಕಣದಲ್ಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications