ಹಿರಿಯೂರು: 25 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್
ಹಿರಿಯೂರು, ಜನವರಿ, 14: ಇಂದಿರಾ ಆವಾಸ್ ಯೋಜನೆಯಲ್ಲಿ ಆಯ್ಕೆಯಾದ ಮನೆಯ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದು, 25 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಭಾನುವಾರ (ಜನವರಿ 14) ನಡೆದಿದೆ.
ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರಿಗೆ ಇಂದಿರಾ ಆವಾಸ್ ಯೋಜನೆಯಲ್ಲಿ ಮನೆ ಮಂಜೂರು ಆಗಿತ್ತು. ಮನೆಯ ಬಿಲ್ ಮಾಡಿಕೊಡಲು ಬಿಲ್ ಕಲೆಕ್ಟರ್ ಆನಂದ್ 30 ಸಾವಿರ ಲಂಚ ಕೇಳಿದ್ದರು.

ಇದರ ಬಗ್ಗೆ ಪಾಂಡುರಂಗಪ್ಪ ಲೋಕಾಯುಕ್ತರಿಗೆ ದೂರು ನೀಡಿದ್ದರು. ಭಾನುವಾರ ಮನೆಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಆನಂದ್ ರೆಡ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
20 ಸಾವಿರ ಬಹುಮಾನ: ಇನ್ನು ಸರ್ಕಾರಿ ಇಲಾಖೆಗಳಲ್ಲಿ ಯಾವುದಾದರೂ ಒಂದು ಕೆಲಸ ಆಗಬೇಕೇಂದರೆ ಲಂಚ ಕೊಡಲೇಬೇಕು. ಇಲ್ಲವಾದರೆ ಸಮಯಕ್ಕೆ ತಕ್ಕಂತೆ ನಮ್ಮ ಕೆಲಸ ಆಗುವುದಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಲಂಚದ ಹಾವಳಿ ತಾಂಡವವಾಡುತ್ತಿದೆ. ಇದರ ಮಧ್ಯೆ ಲಂಚಕೋರರನ್ನು ಲೋಕಾಯುಕ್ತಕ್ಕೆ ಹಿಡಿಸಿದವರಿಗೆ 20 ಸಾವಿರ ಬಹುಮಾನ ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ಹೌದು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿಗೆ ಸಂಬಂಧಪಟ್ಟ ಪೋಸ್ಟ್ ಇದಾಗಿದ್ದು ಎಜಿ. ಈಶ್ವರಪ್ಪ, ಅತ್ತಿಘಟ್ಟ ಹೆಸರಿನಲ್ಲಿ ಪೋಸ್ಟ್ ಹರಿದಾಡುತ್ತಿದೆ. "ಹೊಸದುರ್ಗ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಲಂಚಾವತಾರ ತಾಂಡವಡುತ್ತಿದ್ದು, ಲಂಚ ಕೇಳುವ ಅಧಿಕಾರಿ ಇಲ್ಲವೇ ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ಹಿಡಿದುಕೊಟ್ಟರೆ 20,000 ಬಹುಮಾನವನ್ನು ನೀಡಲಾಗುವುದು," ಎಂದು ಪೋಸ್ಟ್‌ನಲ್ಲಿ ಬರೆಯಲಾಗಿತ್ತು.
"ಲಂಚ ಕೇಳಿದ ಸಂದರ್ಭದಲ್ಲಿ ನಮಗೆ ಕರೆ ಮಾಡಿದ್ದಲ್ಲಿ ಲಂಚ ಕೇಳಿದವರನ್ನು ಯಾವ ರೀತಿ ಹಿಡಿಸಬೇಕು ಎಂಬ ಸಲಹೆ ಸೂಚನೆಗಳನ್ನು ಸಹ ತಿಳಿಸಿಕೊಡಲಾಗುವುದು. ಲೋಕಾಯುಕ್ತರನ್ನು ಸಂಪರ್ಕಿಸುವ ರೀತಿ ನೀತಿ ತಿಳಿಸುತ್ತೇವೆ, ಇಲ್ಲವೇ ನಾವೇ ಸಂಪರ್ಕ ಮಾಡಿಕೊಡುತ್ತೇವೆ.
ಯಾರಾದರೂ ನಿಮ್ಮ ಕೆಲಸ ಮಾಡಲು ವಿಳಂಬ ಮಾಡಿದಾಗ ಇಲ್ಲ ಲಂಚ ಕೇಳಿದಾಗ ನಮಗೆ ಸಂಪರ್ಕಿಸಿ ಎಂದು ಎ.ಜಿ.ಈಶ್ವರಪ್ಪ, ಅತ್ತಿಘಟ್ಟ, ಮೊಬೈಲ್ ನಂಬರ್ 7259739157 ಎಂದು," ನಮೂದಿಸಿದ್ದಾರೆ. ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ಈ ಕುರಿತು ಮಾತನಾಡಿದ ಈಶ್ವರಪ್ಪ ಅವರು, ನನ್ನ ವಿಚಾರಧಾರೆಗಳು ಬೇರೆ ಬೇರೆ ಇದಾವೆ. ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಸಾರ್ವಜನಿಕರಿಗೆ, ರೈತರಿಗೆ ಒಳ್ಳೆಯದಾಗಲಿ ಎಂಬ ನಿಟ್ಟಿನಲ್ಲಿ ಒಂದಿಷ್ಟು ಬದಲಾವಣೆ ತರಲು ಮುಂದೆ ಬಂದೆ. ಸಮಾಜ ನಮಗೆ ಎಲ್ಲಾ ಕೊಟ್ಟಿದೆ. ನಾವು ಸಮಾಜಕ್ಕೆ ಏನಾದರೂ ಕೊಡಬಹುದು ಎಂಬ ನಿಟ್ಟಿನಲ್ಲಿ ಒಂದೊಳ್ಳೆ ಉತ್ತಮ ಕೆಲಸ ಮಾಡಬೇಕು ಎಂದಾಗ ಈ ರೀತಿ ಬದಲಾವಣೆ ತರಲು ಮುಂದಾಗಿ, ಜನರು ಸರಿಪಡಿಸಲು ಮುಂದಾದರೆ ಜನರು ಮಾತ್ರ ಮುಂದೆ ಬರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದರು.
ಹಾಗೆಯೇ ಒಳ್ಳೆಯವರಿಗೆ ಒಳ್ಳೆಯದು ಎಂಬ ಮಾತು ಇತ್ತಲ್ವಾ, ಈ ಮಾತು ಸದ್ಯಕ್ಕೆ ದೂರವಾದುದು ಎಂದರು. ಸಾಮಾಜಿಕ ಕಳಕಳಿ ಇಟ್ಟುಕೊಂಡು ಹೊಸದುರ್ಗ ತಾಲ್ಲೂಕಿನಲ್ಲಿ ಬದಲಾವಣೆ ತರಲು ಚಿಂತನೆ ಮಾಡಲಾಯಿತು. ಈ ಎಲ್ಲ ವ್ಯವಸ್ಥೆಗೆ ಪ್ರಕೃತಿ ಪಾಠ ಕಲಿಸಲಿದೆ. ಮುಂದಿನ ದಿನಗಳಲ್ಲಿ ಇಂತಹ ವ್ಯವಸ್ಥೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬದಲಾವಣೆ ತುಂಬಾ ಕಷ್ಟ ಇದೆ ಎಂದು ಬೇಸರ ಹೊರಹಾಕಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications