ಚಿತ್ರದುರ್ಗ: ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿ ಮೇಲೆ ಪ್ರಯಾಣಿಕರ ಹಲ್ಲೆ, ವಿಡಿಯೋ ವೈರಲ್
ಚಿತ್ರದುರ್ಗ, ಫೆಬ್ರವರಿ, 06: ಖಾಸಗಿ ಬಸ್‌ನಲ್ಲಿ ಪ್ರಯಾಣಿಕರು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡವರ ಮಾರ್ಗದಿಂದ ಹಿರಿಯೂರು ಮಾರ್ಗವಾಗಿ ಬರುವ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಸಣ್ಣ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಪ್ರಯಾಣಿಕರ ಮಧ್ಯೆ ಜಗಳ
ಸಣ್ಣ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಪ್ರಯಾಣಿಕರ ಮಧ್ಯೆ ಜಗಳವಾಗಿದ್ದು, ಈ ಸಂಬಂಧ ವಿದ್ಯಾರ್ಥಿ ಶಿವರಾಜ್ (17) ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹಲ್ಲೆ ನಡೆಸಿದ್ದು ಯಾರು?
ಆದಿವಾಲ ಭೋವಿ ಕಾಲೋನಿಯ ತಿರುಮಲ ನಗರದ ಯೋಗಿ ಮತ್ತು ಸುಧಾಕರ್ ಹಾಗೂ ಇವರ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಡು ರಸ್ತೆಯಲ್ಲೆ ಖಾಸಗಿ ಬಸ್ ನಿಲ್ಲಿಸಿ ವಿದ್ಯಾರ್ಥಿ ಶಿವರಾಜ್ ಮೇಲೆ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪೊಲೀಸರು ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.












Click it and Unblock the Notifications