ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್ ಸೋಲಿನ ಸುದ್ದಿ ಕೇಳಿ ಅಭಿಮಾನಿ ಸಾವು
ಚಿತ್ರದುರ್ಗ, ಮೇ 1 : ಇಂದು ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಅಭ್ಯರ್ಥಿಯ ಫಲಿತಾಂಶ ಕೇಳಿ ವ್ಯಕ್ತಿಯೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ಹಿರಿಯೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಮತ್ತು ಬಿಜೆಪಿ ಅಭ್ಯರ್ಥಿ ಕೆ ಪೂರ್ಣಿಮಾ ನಡುವೆ ಪೈಪೋಟಿ ಶುರುವಾಗಿದ್ದು , ಕೈ ಅಭ್ಯರ್ಥಿ ಸುಧಾಕರ್ ಅವರು ಸುಮಾರು 5,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರು.

ಬಿಜೆಪಿ ಅಭ್ಯರ್ಥಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಹಿನ್ನಡೆ ಸಾಧಿಸಿದ್ದನ್ನು ಕೇಳಿದ ಅಭಿಮಾನಿಯೊಬ್ಬರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ಆಲಮರದಹಟ್ಟಿ ಗ್ರಾಮದ ಈರಣ್ಣ ಮೃತ ವ್ಯಕ್ತಿ ಎಂದು ಗುರಿಸಲಾಗಿದೆ.

ಚಿತ್ರದುರ್ಗದಲ್ಲಿ ಕೈ ಹೊಡೆತಕ್ಕೆ ಬಿಜೆಪಿ ಚಿದ್ರ ಚಿದ್ರ!
ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಕೈ ಹೊಡೆತಕ್ಕೆ ಬಿಜೆಪಿ ಛಿದ್ರಾ ಛಿದ್ರವಾಗಿದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚಳ್ಳಕೆರೆ ಕೈ ಅಭ್ಯರ್ಥಿ ಟಿ. ರಘುಮೂರ್ತಿ, ಮೊಳಕಾಲ್ಮೂರು ಎನ್ ವೈ ಗೋಪಾಲಕೃಷ್ಣ ಹಾಗೂ ಚಿತ್ರದುರ್ಗ ಕೆಸಿ ವೀರೇಂದ್ರ ಪಪ್ಪಿ ಗೆಲುವು ಸಾಧಿಸಿದ್ದಾರೆ. ಇನ್ನು ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಹಾಗೂ ಹೊಸದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಜಿ ಗೋವಿಂದಪ್ಪ ಗೆಲುವು ಸಾಧಿಸಿದ್ದಾರೆ.












Click it and Unblock the Notifications