ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ಗೆ ಸಿಗುತ್ತಾ ಸಚಿವ ಸ್ಥಾನ?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್ 18: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಇಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ದೆಹಲಿ ತಲುಪಿದ್ದಾರೆ. ಇತ್ತ ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.

ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರಲ್ಲಿ ಪೈಪೋಟಿ ನಡೆಯುತ್ತಿದ್ದು, ಇದರ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

 ಸ್ವಪಕ್ಷದ ತೀರ್ಮಾನಕ್ಕೆ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ಸ್ವಪಕ್ಷದ ತೀರ್ಮಾನಕ್ಕೆ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು, ಮಹಿಳಾ ಕೋಟಾದಡಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳಲು ಸಿಎಂ ತಿರ್ಮಾನಿಸಿದ್ದಾರೆಂದು ತಿಳಿದು ಬಂದಿದೆ.

Chitradurga: Hiriyuru MLA Purnima Srinivas Likely To Get Minister Seat

ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಶಶಿಕಲಾ ಜೊಲ್ಲೆ ಅಧಿಕಾರ ಸ್ವೀಕರಿಸಿ ಒಂದು ವರ್ಷ ಕಳೆದಿದ್ದು, ಯಾವುದೇ ಬದಲಾವಣೆಯೂ ಆಗಿಲ್ಲ. ನಿರೀಕ್ಷೆಗೆ ತಕ್ಕಂತೆ ಇಲಾಖೆಯಲ್ಲಿ ಪ್ರಗತಿ ಸಾಧಿಸಲು ವಿಫಲರಾಗಿದ್ದಾರೆ. ಇಲಾಖೆಯಲ್ಲಿ ಯಾವುದೇ ಸುಧಾರಣೆ ಮಾಡದಿರುವುದೇ ಪ್ರಮುಖ ಕಾರಣ ಎಂದು ಸಚಿವ ಸಂಪುಟದಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಕೋಕ್ ಸಿಗುವ ಸಾಧ್ಯತೆ ಎನ್ನಲಾಗಿದೆ.

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಒಬ್ಬರಾಗಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿತ್ತು. ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದ ತೆರವಾದ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಬಿಜೆಪಿ ಸುಮಾರು 12 ಸಾವಿರ ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಗೆಲುವು ಸಾಧಿಸಿದ್ದಾರೆ.

Recommended Video

Chinaಗೆ ತಕ್ಕ ಪಾಠ ಕಲಿಸಲು ಮುಂದಾದ Ratan Tata | Oneindia Kannada

ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಮತಗಳು ನಿರ್ಣಾಯಕ ಪಾತ್ರ ವಹಿಸಿದ್ದರಿಂದ ಹಾಗೂ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಭರ್ಜರಿ ಪ್ರಚಾರದಿಂದ ಬಿಜೆಪಿ ಗೆಲುವಿಗೆ ಕಾರಣರಾದರು. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಏಕೈಕ ಶಾಸಕಿಯಾಗಿರುವ ಪೂರ್ಣಿಮಾಗೆ ಸಚಿವ ಸ್ಥಾನ ದೊರೆಯಲಿದೆ ಎನ್ನಬಹುದು.

English summary
BJP MLA K. Purnima Srinivas of Hiriyuru constituency in Chitradurga district is likely to get a ministerial seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X