• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರು: ಕಾಂಗ್ರೆಸ್‌ಗೆ ಗೆಲುವು, ನೆಲಕಚ್ಚಿದ ಬಿಜೆಪಿ; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಮುನ್ಸೂಚನೆ!

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮಾರ್ಚ್ 31: ವಿವಿಧ ಕಾರಣಗಳಿಂದ ತೆರವಾಗಿದ್ದ ಹಿರಿಯೂರು ನಗರಸಭೆಯ ನಾಲ್ಕು ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಬುಧವಾರ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ನಾಲ್ಕಕ್ಕೆ ನಾಲ್ಕು ಸ್ಥಾನಗಳಲ್ಲಿ ವಿಜಯ ಸಾಧಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಈ ಫಲಿತಾಂಶ ಆಘಾತ ತಂದಿದ್ದು, ಮುಂಬರುವ ಹಿರಿಯೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೋಲಿನ ಮುನ್ಸೂಚನೆ ನೀಡಿದೆ ಎನ್ನಬಹುದಾಗಿದೆ.

ಚಳ್ಳಕೆರೆ ತಿಪ್ಪೇರುದ್ರಸ್ವಾಮಿ ಜಾತ್ರೆ; ಮುಕ್ತಿ ಬಾವುಟ 21 ಲಕ್ಷಕ್ಕೆ ಹರಾಜುಚಳ್ಳಕೆರೆ ತಿಪ್ಪೇರುದ್ರಸ್ವಾಮಿ ಜಾತ್ರೆ; ಮುಕ್ತಿ ಬಾವುಟ 21 ಲಕ್ಷಕ್ಕೆ ಹರಾಜು

6, 7, 15 ಮತ್ತು 16ನೇ ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದು, ಹಿರಿಯೂರು ನಗರದಲ್ಲಿ ಬಿಜೆಪಿ ಅಲೆ ಇಲ್ಲದಂತೆ ಮಾಡಿದ್ದಾರೆ. 6ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಜಬೀವುಲ್ಲಾ 905 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ಎಂ.ಮುಬಾರಕ್ 317 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಕೇವಲ 13 ಮತಗಳನ್ನು ಪಡೆದಿದ್ದಾರೆ.

7ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ್ 866 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ವಿಶ್ವನಾಥ್ 12 ಮತ ಪಡೆದು ಹೀನಾಯ ಸೋಲು ಕಂಡಿದ್ದಾರೆ. 15 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ 548 ಮತ ಪಡೆದರು ಜಯಗಳಿಸಿದ್ದರೆ, ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಶೈಲಜಾ 237 ಮತಗಳನ್ನು ಪಡೆದು ಪರಭವಗೊಂಡಿದರು.

16ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಗೀತಾ 675 ಮತ ಪಡೆದು ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಮಮತಾ 183 ಮತಗಳನ್ನು ಪಡೆದು ಸೋಲುಂಡಿದ್ದಾರೆ. 16 ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಕ್ಷ್ಮಿ ಎಂಬುವವರು 00 ಮತ ಪಡೆದು ದಾಖಲೆ ನಿರ್ಮಿಸಿದ್ದಾರೆ. ಇವರು ಒಂದು ಮತ ಗಳಿಸಲು ಸಹ ಸಾಧ್ಯವಾಗಿಲ್ಲ.

ಎಂಎಲ್ಎ, ಎಂಪಿ ಪ್ರಚಾರ

   ಕೊರೊನಾ ಸಂಕಷ್ಟಕ್ಕೆ ಬೇಸತ್ತು ಕ್ಯಾಬ್‌ ಚಾಲಕ ಆತ್ಮಹತ್ಯೆ ಯತ್ನ! ಚಾಲಕನ ಸ್ಥಿತಿ ಗಂಭೀರ | Oneindia Kannada

   ನಗರಸಭೆಯ ಉಪ ಚುನಾವಣೆಯಲ್ಲಿ ಸ್ಥಳೀಯ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹಾಗೂ ಸಂಸದ ಎ.ನಾರಾಯಣಸ್ವಾಮಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರೂ, ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಮಾಜಿ ಸಚಿವ ಡಿ.ಸುಧಕಾರ್ ಏಕಾಂಗಿ ಪ್ರಚಾರ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತೇನೆ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

   English summary
   Congress candidates have won the four seats in the Hiriyuru Municipality By-election.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X