ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ; ಸಾವಿರಾರು ರೂ. ಮೌಲ್ಯದ ಔಷಧಿ ವಶ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 22: ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್‌ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಖಾಸಗಿ ಕ್ಲಿನಿಕ್ ಮೇಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿ, ಸಾವಿರಾರು ರೂಪಾಯಿ ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಿರಿಯೂರು ತಹಶೀಲ್ದಾರ ಜಿ.ಎಚ್ ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಒ ಡಾ.ವೆಂಕಟೇಶ್ ನೇತೃತ್ವದ ಜಂಟಿ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕಾನಂದ ಬಂಧಿತ ಆರೋಪಿ ಎನ್ನಲಾಗಿದೆ. ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್‌ಗಳು ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಎನ್ನಲಾಗಿದೆ.

Chitradurga: Hiriyuru Tahasildar Raid On Private Clinic; Illegal Medicine Siezed

ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗಪಡಿಸಿಕೊಂಡು ಮಾರಾಟ ಮಾಡಿ, ಹಣಗಳಿಸುತ್ತಿದ್ದನು ಎಂದು ತಿಳಿದು ಬಂದಿದೆ. ಈ ಮೂಲಕ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ ಆರೋಪಿಯ ವಿರುದ್ಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recommended Video

Yediyurappa ಕೊರೊನ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ | Oneindia Kannada

English summary
Officers raided on private clinic and siezed medicines in Javagondanahalli village in Hiriyuru taluk, Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X