ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಂ. ಚಂದ್ರಪ್ಪ ಅಧಿಕಾರ ಸ್ವೀಕಾರ
ಚಿತ್ರದುರ್ಗ, ಸೆಪ್ಟೆಂಬರ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರು ಇಂದು ಅಧಿಕಾರ ಸ್ವೀಕರಿಸಿದರು.
Recommended Video
KR Marketನಲ್ಲಿ 5 ತಿಂಗಳಿನ ಬಳಿಕ ವ್ಯಾಪಾರ ಶುರು | Oneindia Kannada
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಚರಣೆ ಸಲ್ಲಿಸಿದರು.

ಎಂ.ಚಂದ್ರಪ್ಪ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ನಿಗಮ ಸ್ಥಾನದ ಅಧ್ಯಕ್ಷಗಿರಿ ದೊರೆತ ಹಿನ್ನೆಲೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರು. ಪಕ್ಷ ಹೇಳಿದಂತೆ ನಾನು ಕೆಲಸ ಮಾಡಲು ಸಿದ್ಧ ಎಂದು ಈ ಹಿಂದೆಯೇ ತಿಳಿಸಿದ್ದರು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸಿದ್ದಾರೆ.












Click it and Unblock the Notifications