ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ದ್ವೇಷಕ್ಕೆ ಹೋಟೆಲ್‌ಗೆ ಬಿತ್ತು ಬೆಂಕಿ: ಹಳ್ಳಿಗಳಲ್ಲಿ ಹೊತ್ತಿದೆ ವೈಷ್ಯಮದ ಕಿಡಿ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 1: ಹೊಸ ವರ್ಷಕ್ಕೆ ಕಾಲಿಟ್ಟ ಘಳಿಗೆಯಲ್ಲೇ ಚಳ್ಳಕೆರೆ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ರಾಜಕೀಯ ಕಿಚ್ಚು ಹೆಚ್ಚಾಗಿದೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ವರ್ಷದ ಪ್ರಥಮ ಅಹಿತಕರ ಘಟನೆಯಾಗಿ ದಾಖಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಹಳ್ಳಿಗಳಲ್ಲಿ ರಾಜಕೀಯ ದ್ವೇಷ ಸಹ ಶುರುವಾಗಿದೆ. ಇದಕ್ಕೆ ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಮದ ಹೋಟೆಲ್‌ಗೆ ಬೆಂಕಿ ಹಚ್ಚಿದ ಘಟನೆ ಸಾಕ್ಷಿಯಾಗಿದೆ.

ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ ಕೋರಿದ ಕಾಲೇಜು ಸಿಬ್ಬಂದಿಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ ಕೋರಿದ ಕಾಲೇಜು ಸಿಬ್ಬಂದಿ

ಸಾಣೀಕೆರೆ ಗ್ರಾಮದ ಬಸವರಾಜ್ ಎಂಬುವವರ ಹೋಟೆಲ್ ನಿನ್ನೆ ತಡರಾತ್ರಿ ಬೆಂಕಿಗೆ ಆಹುತಿಯಾಗಿದ್ದು, ಇದಕ್ಕೆ ರಾಜಕೀಯ ದ್ವೇಷವೇ ಕಾರಣ ಎನ್ನಲಾಗಿದೆ.

Chitradurga: Hotel Sets On Fire For Political Hatred In Challakere

ಸಾಣೀಕೆರೆ ಗ್ರಾ.ಪಂ ಚುನಾವಣೆಗೆ ಅಂಜು.ಎಂ ಮತ್ತು ಬಿ.ಎ. ಕ್ಷಿತಿಜಾ ನಡುವೆ ತೀವ್ರ ಸ್ಪರ್ಧೆ ನಡೆದಿತ್ತು. ತಲಾ 376 ಮತ ಪಡೆದು ಇಬ್ಬರು ಅಭ್ಯರ್ಥಿಗಳು ಸಮಬಲ ಸಾಧಿಸಿದ್ದರು. ಚುನಾವಣಾ ಅಧಿಕಾರಿಗಳು ಇಬ್ಬರು ಅಭ್ಯರ್ಥಿಗಳ ಸಮಕ್ಷಮದಲ್ಲಿ ಟಾಸ್ ಮೂಲಕ ಅಂಜು.ಎಂ ಅವರನ್ನು ಸದಸ್ಯೆಯಾಗಿ ಆಯ್ಕೆ ಮಾಡಿದ್ದರು.

ಫಲಿತಾಂಶ ಹೊರಬಿದ್ದು 24 ತಾಸಲ್ಲಿ ಅಂಜು ಎಂ. ಅವರ ಬೆಂಬಲಿಗ ಬಸವರಾಜ ಅವರ ಹೋಟೆಲ್‌ಗೆ ತಡರಾತ್ರಿ ಬೆಂಕಿ ಹಚ್ಚಲಾಗಿದೆ ಎನ್ನಲಾಗುತ್ತಿದೆ. ಪರಾಜಿತ ಅಭ್ಯರ್ಥಿ ಕ್ಷಿತಿಜಾ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎನ್ನುವ ಆರೋಪಗಳು ಸದ್ಯ ಗ್ರಾಮದಲ್ಲಿ ಕೇಳಿ ಬರುತ್ತಿವೆ. ಸಾಣಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Chitradurga: Hotel Sets On Fire For Political Hatred In Challakere

Recommended Video

ಸಿದ್ದು ಪದೇಪದೆ BSY ಬಗ್ಗೆ ಯಾಕೆ ಹೀಗೆ ಹೇಳುತ್ತಿದ್ದಾರೆ? | Oneindia Kannada

ಚುನಾವಣೆ ಬಳಿಕ ರಾಜಕೀಯ ಮರೆತು ಎಲ್ಲರೂ ಒಂದಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿದರೆ ನಿಜಕ್ಕೂ ಮತ್ತೊಬ್ಬರಿಗೆ ಮಾದರಿಯಾಗುತ್ತಾರೆ. ಇಂತಹ ಘಟನೆಗಳು ಇಂದಿಗೆ ಕೊನೆಯಾಗಲಿ ಎಂಬುದು ನಮ್ಮ ಆಶಯವಾಗಿದೆ.

English summary
Political hatred in the villages has started after the Gram Panchayat elections were announced. A hotel has been set on fire in the Sanikere village of Challakere taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X