Lok Sabha Election 2024: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ..? ಇಲ್ಲಿದೆ ಸಂಪೂರ್ಣ ವಿವರ
ಚಿತ್ರದುರ್ಗ, ಜೂನ್ 04: ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು 6,84,890 ಮತಗಳನ್ನು ಪಡೆಯುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ.
ಬಿಜೆಪಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ 2206, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014,
ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ. ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕøತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.
ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications