ಹುಂಡಿ ಎಣಿಕೆ: ವದ್ದಿಕೆರೆ ಸಿದ್ದಪ್ಪನಿಗೆ ಹರಿದು ಬಂತು1 ಕೋಟಿ 24 ಲಕ್ಷ ರೂ.

ಹಿರಿಯೂರು, ಸೆಪ್ಟೆಂಬರ್‌, 27: ಹಿರಿಯೂರು ತಾಲೂಕಿನ ಶ್ರೀ ಕ್ಷೇತ್ರ ವದ್ದೀಕೆರೆ ಸಿದ್ದೇಶ್ವರ ದೇವಾಲಯದಲ್ಲಿ ಇಂದು ಹುಂಡಿ ಹಣ ಎಣಿಕೆ ನಡೆದಿದ್ದು, ಈ ವೇಳೆ 1ಕೋಟಿ 24 ಲಕ್ಷ ಹಣ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಧಿಸೂಚಿತ "ಎ" ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್, ತಹಶೀಲ್ದಾರ್ ರಾಜೇಶ್ ಕುಮಾರ್ ಸಮ್ಮುಖದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಗಿದೆ.

Hundi counting in vaddikere Siddeshwara temple, 1 Crore 24 Lakh Rupees collection

ತಿಹಾಸದಲ್ಲಿ ಪ್ರಥಮ ಬಾರಿಗೆ ದಾಖಲೆ ಮೊತ್ತದ 1,24,67,800 ರೂಪಾಯಿ (ಒಂದು ಕೋಟಿ 24 ಲಕ್ಷದ 67 ಸಾವಿರದ 800 ರೂ.) ಹಣ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ, ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿತವಾಗಿವೆ.

ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ತೆರೆದಿರುವ ಉಳಿತಾಯ ಖಾತೆಗಳಿಗೆ ಸಮನಾಗಿ 1) ಕೆನರಾ ಬ್ಯಾಂಕ್ ಐಮಂಗಲ ಶಾಖೆ ಹಾಗೂ 2) ಪ್ರಗತಿ ಕೃಷ್ಣ ಬ್ಯಾಂಕ್ ಯರಬಳ್ಳಿ ಶಾಖೆಗೆ ಸ್ಥಳದಲ್ಲಿ ಜಮಾ ಮಾಡಲಾಗಿರುತ್ತದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ.ಕಾರ್ತಿಕ್‌, ತಹಶೀಲ್ದಾರ್ ರಾಜೇಶ್ ಕುಮಾರ್. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಹಿರಿಯೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ವದ್ದಿಕೆರೆ ಗ್ರಾಮಸ್ಥರುಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+