ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲವೆಂದ ಡಿ.ಕೆ ಶಿವಕುಮಾರ್

ಚಿತ್ರದುರ್ಗ, ನವೆಂಬರ್ 22: ಸಿಬಿಐ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಖುದ್ದು ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಸಿಬಿಐ ಸಮನ್ಸ್ ವಿಚಾರಕ್ಕೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.

ನಾನು ಮಂತ್ರಿಯಾಗಿದ್ದ ಸಂದರ್ಭದಲ್ಲಿ, ಕಳೆದ 30 ವರ್ಷ ರಾಜಕಾರಣದಲ್ಲಿ, ನನ್ನ ಮೇಲೆ ಯಾವುದೇ ಆರೋಪ ಇಲ್ಲ. ಕಮಿಷನ್ ತನಿಖೆ ಯಾವುದೂ ಇಲ್ಲ. ಮಾಡಿರುವ ತನಿಖೆಗಳೆಲ್ಲವೂ ಕೂಡಾ ಕ್ಲೋಸ್ ಆಗಿವೆ ಎಂದರು.

 Chitradurga: I Am Not Involved In Any Corruption: DK Shivakumar

ಆದಾಯಕ್ಕಿಂತ ಆಸ್ತಿ ಜಾಸ್ತಿಯಾಗಿದೆ ಎಂದು ಕರ್ನಾಟಕದಲ್ಲಿ ಒಂದೇ ಒಂದು ಕೇಸ್ ಸಿಬಿಐಗೆ ನೀಡಿದ್ದಾರೆ. ದಾಳಿ ಮಾಡಿದ್ದರು, ಈಗ ಸಮನ್ಸ್ ನೀಡಿದ್ದಾರೆ. ಕಾನೂನಿಗೆ ಗೌರವ ನೀಡಿ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ಹೆಗಲ ಮೇಲಿನ ಶಾಲು ತೋರಿಸಿ ಇದು ಬಾವುಟ. ಕಾಂಗ್ರೆಸ್ ನವರಿಗೆ ಮಾತ್ರ ಇದು ಇರುವುದು, ಬೇರೆ ಯಾರಿಗೂ ಇಲ್ಲ ಇದೊಂದೆ ಉತ್ತರ ಎಂದು ಸಂಸದ ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದರು.

 Chitradurga: I Am Not Involved In Any Corruption: DK Shivakumar

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಟಿಕೆಟ್ ಗಾಗಿ ಫೈಟ್ ವಿಚಾರ ಮಾತನಾಡಿದ ಅವರು, ಇದು ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಎಂದು ಹೇಳಿ ಡಿ.ಕೆ ಶಿವಕುಮಾರ್ ಜಾರಿಕೊಂಡರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+