ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟ ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಸೆಪ್ಟೆಂಬರ್ 09 : 'ನಾನು ಕ್ಷೇತ್ರದ ಜನರಿಗೆ ಮತ್ತು ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಸೇರುತ್ತಿಲ್ಲ' ಎಂದು ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಗೂಳಿಹಟ್ಟಿ ಶೇಖರ್ ಅವರು, 'ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಾನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದೆ' ಎಂದರು.

'ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಗ್ಗೆ ನನ್ನ ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಕಾಂಗ್ರೆಸ್ ಸೇರುತ್ತಿಲ್ಲ. ನನ್ನ ಕ್ಷೇತ್ರದ ಜನರು ಮತ್ತು ಬಿಜೆಪಿ ಪಕ್ಷಕ್ಕೆ ನಾನು ದ್ರೋಹ ಮಾಡುವುದಿಲ್ಲ ' ಎಂದರು.
'ಹೊಸದುರ್ಗ ಕ್ಷೇತ್ರದ ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆ ಇಲ್ಲ. ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ
ದಾಖಲು ಮಾಡುವೆ' ಎಂದು ಗೂಳಿಹಟ್ಟಿ ಶೇಖರ್ ಎಚ್ಚರಿಕೆ ನೀಡಿದರು.
ಡಿ.ಕೆ.ಶಿವಕುಮಾರ್ ಅವರನ್ನು ಗೂಳಿಹಟ್ಟಿ ಶೇಖರ್ ಭೇಟಿ ಮಾಡಿದ ಬಳಿಕ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇಂದು ಗೂಳಿಹಟ್ಟಿ ಶೇಖರ್ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications