2018ನೇ ಚುನಾವಣೆ ಬಗ್ಗೆ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದ್ದೇನು?
ಚಿತ್ರದುರ್ಗ, ಆಗಸ್ಟ್ 30 : ಮಾದಾರ ಚನ್ನಯ್ಯ ಸ್ವಾಮೀಜಿ ರಾಜಕೀಯ ಪ್ರವೇಶದ ಕುರಿತು ಹರಿದಾಡುತ್ತಿರುವ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಿದರು. 'ರಾಜಕೀಯ ಪ್ರವೇಶದ ಚಿಂತನೆ ನಮ್ಮ ಮುಂದೆ ಇಲ್ಲ' ಎಂದು ಅವರು ಸ್ಪಷ್ಟಪಡಿಸಿದರು.
ಚಿತ್ರದುರ್ಗದ ಮಠದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ, ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, 'ಯಾವ ರಾಯಕೀಯ ಪಕ್ಷದವರು ತಮ್ಮನ್ನು ಪಕ್ಷ ಸೇರುವಂತೆ ಆಹ್ವಾನಿಸಿಲ್ಲ' ಎಂದು ಹೇಳಿದರು.

'ರಾಜಕೀಯ ಪ್ರವೇಶ ಚಿಂತನೆ ನಮ್ಮ ಮುಂದೆ ಇಲ್ಲ. ಯಡಿಯೂರಪ್ಪ ಮನೆಗೆ ಹೋಗಿದ್ದು ಸೌಹಾರ್ದಯುತವಾಗಿ ಅಷ್ಟೆ. ಮಾದರ ಗುರುಪೀಠ ಎಲ್ಲಾ ನಾಯಕರೊಂದಿಗೆ ಉತ್ತಮ ಸಂಪರ್ಕ ಹೊಂದಿದೆ' ಎಂದು ಮಾದರ ಚನ್ನಯ್ಯ ಸ್ವಾಮೀಜಿ ಸ್ಪಷ್ಟಪಡಿಸಿದರು.
ಸೋಮವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನೆಯಲ್ಲಿ ದಲಿತರಿಗೆ ಔತಣಕೂಟ ಆಯೋಜಿಸಲಾಗಿತ್ತು. ಇದರಲ್ಲಿ ಮಾದರ ಚನ್ನಯ್ಯ ಸ್ವಾಮೀಜಿಗಳು ಪಾಲ್ಗೊಂಡಿದ್ದರು.
ನಂತರ ಸ್ವಾಮೀಜಿಗಳು ಬಿಜೆಪಿ ಸೇರಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಹೊಳಲ್ಕೆರೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವರು. ಇಂದು ಸ್ವಾಮೀಜಿಗಳು ಈ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications