ಚಿತ್ರದುರ್ಗದಲ್ಲೂ ಐಎಂಎನಿಂದ ಜನರಿಗೆ ವಂಚನೆ
ಚಿತ್ರದುರ್ಗ, ಜೂನ್ 14: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಕೋಟೆನಾಡು ಚಿತ್ರದುರ್ಗ ಕೂಡ ಹೊರತಾಗಿಲ್ಲ. ಚಿತ್ರದುರ್ಗದ ಜನರೂ ಐಎಂಎನಲ್ಲಿ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಐಎಂಎ ವಂಚನೆ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡ ಜನರು ಎಸ್ಪಿ ಕಚೇರಿಗೆ ನ್ಯಾಯಕ್ಕಾಗಿ ಮೊರೆಹೋಗಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದ ಸುಮಾರು 250ಕ್ಕೂ ಹೆಚ್ಚು ಜನರು ಐಎಂಎನಲ್ಲಿ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ ಎಂಬುದು ತಿಳಿದುಬಂದಿದೆ. ಹೆಚ್ಚಿನ ಬಡ್ಡಿ ಆಸೆಗೆ ಆನ್ ಲೈನ್ ಮೂಲಕ ಹೂಡಿಕೆ ಮಾಡಿದ್ದ ಜನರು ಇದೀಗ ವಂಚನೆಗೊಳಗಾಗಿದ್ದಾರೆ. ಹಣ ಹೂಡಿದವರ ಪೈಕಿ ಮುಸ್ಲಿಂ ಸಮುದಾಯದ ಜನರೇ ಹೆಚ್ಚಾಗಿದ್ದಾರೆ, ಹಣ ಕಳೆದುಕೊಂಡಿರುವ ಜನರು ಐಎಂಎ ಮಾಲೀಕನ ಮನ್ಸೂರ್ ಗೆ ಶಾಪ ಹಾಕುತ್ತಿದ್ದಾರೆ.












Click it and Unblock the Notifications