7th Pay Commission: 7ನೇ ವೇತನ ಆಯೋಗ, ಹಳೇ ಪಿಂಚಣಿ ಯೋಜನೆ ಜಾರಿ ಬಗ್ಗೆ ಮಹತ್ವದ ಸುಳಿವು
ಚಿತ್ರದುರ್ಗ, ಮೇ, 31: ಸರ್ಕಾರಿ ನೌಕರರು, ಶಿಕ್ಷಕರ ವರ್ಗ ಕಾಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದು, ಈ ಮೂಲಕ 7ನೇ ವೇತನ ಆಯೋಗ ಜಾರಿ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ಹೊಳಲ್ಕೆರೆ ಕ್ಷೇತ್ರದ ಚಿತ್ರಹಳ್ಳಿ, ಕಣಿವೆ, ಬೊಮ್ಮನಕಟ್ಟೆ, ಬಸಾಪುರ, ಬಿ.ದುರ್ಗ, ಕೋಡಿರಂಗವ್ವನಹಳ್ಳಿ ಸೇರಿ ವಿವಿಧ ವಸತಿ ಹಾಗೂ ಖಾಸಗಿ ಶಾಲೆಗಳಲ್ಲಿ ಶುಕ್ರವಾರ (ಮೇ 31) ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಮತಯಾಚಿಸಿ ಮಾತನಾಡಿದರು.

ಮಾಜಿ ಸಚಿವ, ರಾಜ್ಯದ ಹಿರಿಯ ನಾಯಕ ದಿವಂಗತ ಎ.ಕೃಷ್ಣಪ್ಪ ಅವರ ಕುಟುಂಬದ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರು, ಅನೇಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಕರ ಕಷ್ಟ, ಸಮಸ್ಯೆಗಳ ಅರಿವು ಇದೆ. ಆದ್ದರಿಂದ ಅವರ ಗೆಲುವು ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ರಹದಾರಿ ಆಗಲಿದೆ ಎಂದರು.
ಶಿಕ್ಷಕರ ಬೇಡಿಕೆ ಈಡೇರಿಕೆಗೆ ಹಾಗೂ ಸರ್ಕಾರಿ ನೌಕರರ ಹಿತಕ್ಕೆ ಬದ್ಧವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ ವರದಿ ಜಾರಿಗೆ ಸಿದ್ಧತೆ ನಡೆಸಿದೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆ ರೀತಿಯಲ್ಲಿ, ವಿಧಾನ ಪರಿಷತ್‍ನಲ್ಲೂ ಬಲ ಬೇಕಿದ್ದು, ಡಿ.ಟಿ.ಶ್ರೀನಿವಾಸ್ ಗೆಲುವು ಶಿಕ್ಷಕರ ಬೇಡಿಕೆ ಈಡೇರಿಕೆಗೆ ಹೆಚ್ಚು ಸಹಕಾರಿ ಆಗಲಿದೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ಸೋತು ಸುಣ್ಣವಾಗಿರುವ ಬಿಜೆಪಿಗೆ ವಿಧಾನಪರಿಷತ್ ಚುನಾವಣೆಯಲ್ಲೂ ಸೋಲಿನ ಮುನ್ಸೂಚನೆ ದೊರೆತಿರುವ ಕಾರಣಕ್ಕೆ ವಾಮ ಮಾರ್ಗದಲ್ಲಿ ಸಾಗುತ್ತಿದೆ. ಈ ಮೂಲಕ ಶಿಕ್ಷಕ ಕ್ಷೇತ್ರದ ಪಾವಿತ್ರೃಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ದೂರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಮೂರು ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಸಾಧನೆ ಶೂನ್ಯವಾಗಿದ್ದು, ಈಗಾಗಲೇ ಬಹಳಷ್ಟು ಶಿಕ್ಷಕರು ಭ್ರಮನಿರಸನಗೊಂಡು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿರುವುದು ವಿಜಯದ ಮುನ್ಸೂಚನೆ ಎಂದರು.
ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಶಿಕ್ಷಕರ ನೇಮಕಾತಿ, ವೇತನ ಹೆಚ್ಚಳ, ಶಾಲಾ-ಕೊಠಡಿಗಳ ನಿರ್ಮಾಣ, ಶೌಚಗೃಹ ವ್ಯವಸ್ಥೆ ಹೀಗೆ ಅನೇಕ ಯೋಜನೆಗಳ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇನ್ನೂ ಹೆಚ್ಚಿನ ರೀತಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಲು, ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ವಿದ್ಯಾವಂತ ಡಿ.ಟಿ.ಶ್ರೀನಿವಾಸ್ ಅವರ ಗೆಲುವು ಅಗತ್ಯವಾಗಿದೆ ಎಂದು ಹೇಳಿದರು.
ಉನ್ನತ ವ್ಯಾಸಂಗ ಮಾಡಿರುವ ಡಿ.ಟಿ.ಶ್ರೀನಿವಾಸ್ ಅವರು, ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿರುವ ಯುವ ರಾಜಕಾರಣಿ. ಈ ಕ್ಷೇತ್ರದ ಮೂಲಕ ಶಿಕ್ಷಕರು, ಪದವೀಧರ ಯುವಕರಿಗೆ ಅನುಕೂಲ ಮಾಡಿಕೊಡಲು ಯೋಜನೆ ರೂಪಿಸಿದ್ದು, ಪ್ರಜ್ಞಾವಂತ ಶಿಕ್ಷಕರು ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಅವುಗಳ ಅನುಷ್ಠಾನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಕೋರಿದರು.
ಚಿಂತಕರ ಚಾವಡಿ ಎಂದೇ ಹೆಸರು ಮಾಡಿರುವ ವಿಧಾನಪರಿಷತ್‍ಗೆ ವಿದ್ಯಾವಂತರು, ಶಿಕ್ಷಣದ ಬೆಳವಣಿಗೆ ಕುರಿತು ಕಾಳಜಿ ಹೊಂದಿರುವ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಮಗ್ರ ಅರಿವನ್ನು ಹೊಂದಿರುವ ಶ್ರೀನಿವಾಸ್ ಅವರಂತಹವರು ಸದನ ಪ್ರವೇಶಿಸುವುದು ಅಗತ್ಯವಾಗಿದೆ ಎಂದರು.
ನುಡಿದಂತೆ ನಡೆಯುವ ಖ್ಯಾತಿಗಳಿಸಿರುವ ಕಾಂಗ್ರೆಸ್ ಸರ್ಕಾರ, ಹಳೇ ಪಿಂಚಣಿ ಜೊತೆಗೆ ಅನೇಕ ಜನಪರ, ಶಿಕ್ಷಕರು, ನೌಕರರ ಪರ ಕಾರ್ಯಕ್ರಮ ರೂಪಿಸಿದೆ. ಇವುಗಳ ಅನುಷ್ಠಾನಕ್ಕೆ ಮೇಲ್ಮನೆಯಲ್ಲಿ ಬಿಜೆಪಿ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಅವರ ಧ್ವನಿ ಅಡಗಿಸಿ ಜನಪರ ಧ್ವನಿಯಾಗಲು ಡಿ.ಟಿ.ಶ್ರೀನಿವಾಸ್ ಗೆಲ್ಲಬೇಕಿದೆ ಎಂದು ಹೇಳಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications